ಮದ್ವೆ ಆದಾಗ ತೆಳ್ಳಗಿದ್ದೆ, ಈಗ ಡುಮ್ಮಿ – ಖಾರದಪುಡಿ ಎರಚಿ ಪತ್ನಿ ಮೇಲೆ ಹಲ್ಲೆ ಮಾಡಿದ ಪತಿ!

By
1 Min Read

ಬೆಂಗಳೂರು: ಮದುವೆ ಆಗುವಾಗ ತೆಳ್ಳಗೆ ಸುಂದರವಾಗಿದ್ದೆ, ಈಗ ದಪ್ಪಗಾಗಿದ್ದೀಯಾ ಎಂದು ವ್ಯಕ್ತಿಯೊಬ್ಬ ತನ್ನ ಪತ್ನಿ (Wife), ಮಾವ ಹಾಗೂ ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ನಡೆಸಿರುವುದು ನಗರದ (Bengaluru) ನೆಲಗೆದರನಹಳ್ಳಿಯಲ್ಲಿ ನಡೆದಿದೆ.

ಹಲ್ಲೆ ನಡೆಸಿದ ಪತಿ ಪುಲಿ ಸಾಯಿಕುಮಾರ್ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾಳೆ. ದೂರಿನಲ್ಲಿ, ಸೌಂದರ್ಯದ ವಿಚಾರಕ್ಕೆ ಪದೇ ಪದೇ ಪತಿ ಗಲಾಟೆ ಮಾಡುತ್ತಿದ್ದ. ಅಲ್ಲದೇ ವರದಕ್ಷಿಣೆ ವಿಚಾರಕ್ಕೂ ಜಗಳ ನಡೆಯುತ್ತಿತ್ತು. ಇದೇ ವಿಚಾರಕ್ಕೆ ನನ್ನ, ಮಗ ಹಾಗೂ ನನ್ನ ತಂದೆಯ ಮೇಲೆ ಶನಿವಾರ ಪತಿ ಹಲ್ಲೆ ಮಾಡಿದ್ದಾನೆ ಎಂದು ಉಲ್ಲೇಖಿಸಿದ್ದಾಳೆ.

ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಮಹಿಳೆಗೆ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಪುಲಿ ಸಾಯಿಕುಮಾರ್ 2021ರಲ್ಲಿ ಮ್ಯಾಟ್ರಿಮೋನಿಯಲ್ಲಿ ಪರಿಚಯನಾಗಿದ್ದ. ಬಳಿಕ ಇಬ್ಬರಿಗೂ ಮದುವೆಯಾಗಿತ್ತು. ಆಗಿನಿಂದಲೂ ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾಳೆ.

ಈ ಹಿಂದೆಯೂ ಪುಲಿ ಸಾಯಿಕುಮಾರ್ ವಿರುದ್ಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು. ಇದೀಗ ಮತ್ತೆ ಗಲಾಟೆ ಮಾಡಿ ಹಲ್ಲೆ ಮಾಡಿದ್ದು, ಪೀಣ್ಯ (Peenya) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article