ಪತಿಯಿಂದ್ಲೇ ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳ ವಿಡಿಯೋ ಸೆರೆ – ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿ ಪತ್ನಿಗೆ ಬ್ಲ್ಯಾಕ್‌ಮೇಲ್

Public TV
1 Min Read

– ನಂಗೆ 19 ಮಹಿಳೆಯರ ಜೊತೆ ಅಕ್ರಮ ಸಂಬಂಧವಿದೆ, ನೀನು 2ನೇ ಹೆಂಡತಿ ಎಂದು ಕಿರುಕುಳ

ಬೆಂಗಳೂರು: ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳನ್ನು ಸೀಕ್ರೆಟ್ ಕ್ಯಾಮರಾದಲ್ಲಿ ಸೆರೆ ಹಿಡಿದ ಪತಿ, ತನ್ನ ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಪತ್ನಿಯನ್ನು ಬ್ಲ್ಯಾಕ್‌ಮೇಲ್ ಮಾಡ್ತಿದ್ದ ಘಟನೆ ಬೆಂಗಳೂರಿನ (Bengaluru) ಪುಟ್ಟೇನಹಳ್ಳಿಯಲ್ಲಿ ನಡೆದಿದೆ.

ಕಾಮುಕ ಪತಿ ಸೈಯದ್ ಇನಾಮ್ ವಿರುದ್ಧ ಪತ್ನಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯ ಬೆಡ್‌ರೂಂನಲ್ಲಿ ಸೀಕ್ರೆಟ್ ಕ್ಯಾಮರಾ ಫಿಕ್ಸ್ ಮಾಡಿ, ನನ್ನ ಜೊತೆಗಿನ ಲೈಂಗಿಕ ಕ್ರಿಯೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾನೆ. ಖಾಸಗಿ ವಿಡಿಯೋಗಳನ್ನಿಟ್ಟುಕೊಂಡು ವಿದೇಶಿ ಸ್ನೇಹಿತರ ಜೊತೆ ಮಲಗುವಂತೆ ಒತ್ತಾಯಿಸಿದ್ದಾನೆ. ಅಲ್ಲದೇ ಈ ವಿಡಿಯೋಗಳನ್ನು ಸ್ನೇಹಿತರಿಗೆ ಶೇರ್ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: 5.20 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ – ಅಪಘಾತವೆಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್

ಈಗಾಗಲೇ ನನಗೆ ಮತ್ತೊಂದು ಮದುವೆಯಾಗಿದೆ. ಇದು ಎರಡನೇ ಮದುವೆ. ಅಲ್ಲದೇ ನನಗೆ 19 ಹೆಂಗಸರ ಜೊತೆ ಸಂಬಂಧವಿದೆ ಎಂದು ಕಿರುಕುಳ ಕೊಡುತ್ತಿದ್ದಾನೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನ ಆಧಾರದ ಮೇಲೆ ಪುಟ್ಟೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಪತಿ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.ಇದನ್ನೂ ಓದಿ: 2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, ಹೌಸ್‌ಫುಲ್‌ ಶೋಗಳ ಈ ಅದ್ಭುತ ಪಯಣ: ಜನತೆಗೆ ರಿಷಬ್‌ ಕೃತಜ್ಞತೆ

Share This Article