ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

Public TV
1 Min Read

ಬೆಂಗಳೂರು: ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆ.ಪಿ.ಅಗ್ರಹಾರದಲ್ಲಿ (KP Agrahara) ನಡೆದಿದೆ.

ಗೋವರ್ಧನ್ ಆತ್ಮಹತ್ಯೆಗೊಳಗಾದ ಪತಿ. ಗೋವರ್ಧನ್ ಹಾಗೂ ಪ್ರಿಯಾ ಏಳು ವರ್ಷಗಳ ಹಿಂದೆ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಆಗಾಗ ಮನೆ ಬಿಟ್ಟು ಹೋಗುತ್ತಿದ್ದಳು. ಆದರೆ ಕಳೆದ ಒಂದು ತಿಂಗಳ ಹಿಂದೆ ಮನೆಬಿಟ್ಟು ಹೋಗಿದ್ದ ಪತ್ನಿ ವಾಪಸ್ಸಾಗಿರಲಿಲ್ಲ. ಹೀಗಾಗಿ ಗೋವರ್ಧನ್ ಖಿನ್ನತೆಗೊಳಗಾಗಿದ್ದರು. ಭಾನುವಾರ ರಾತ್ರಿ ಮನೆಗೆ ಬಂದು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಯಂತೆಯೇ ಅಶ್ರಫ್, ರಹಿಮಾನ್ ಹತ್ಯೆಯನ್ನೂ ಎನ್‌ಐಎಗೆ ವಹಿಸಿ: ಮಂಜುನಾಥ ಭಂಡಾರಿ

ಸೋಮವಾರ ಸಂಜೆಯಾದರೂ ಮನೆಯಿಂದ ಹೊರಬರದ ಕಾರಣ ಅನುಮಾನ ಉಂಟಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಕೆ.ಪಿ ಅಗ್ರಹಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಹೆಂಡತಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗೋವರ್ಧನ್ ಸಾವಿಗೆ ಪತ್ನಿ ಪ್ರಿಯಾ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.ಇದನ್ನೂ ಓದಿ: 6 ಜನರಿದ್ದ ವಿಮಾನ ಸಾಗರದಲ್ಲಿ ಪತನ

Share This Article