ಲವ್ವರ್ ಜೊತೆ ಸಿಕ್ಕಿಬಿದ್ದ ಪತ್ನಿ – ಸಿಟ್ಟಿಗೆದ್ದ ಪತಿಯಿಂದ ಡಬಲ್ ಮರ್ಡರ್

Public TV
1 Min Read

ಕಲಬುರಗಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತ್ನಿಯು ಪರ ಪುರುಷನೊಂದಿಗೆ ಒಟ್ಟಿಗೆ ಇದ್ದುದನ್ನು ಕಣ್ಣಾರೆ ಕಂಡ ಪತಿ ಮಾರಕಾಸ್ತ್ರಗಳಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಚ್ಚಿ ಕೊಂದಿರುವ ಘಟನೆ ಕಲಬುರಗಿಯ (Kalaburagi) ಆಳಂದ ತಾಲೂಕಿನ ಮಾದನಹಿಪ್ಪರಗಾ (Madanahipparaga) ಗ್ರಾಮದಲ್ಲಿ ನಡೆದಿದೆ.

ಸೃಷ್ಟಿ(22), ಖಾಜಪ್ಪ(23) ಮೃತರು. ಆರೋಪಿ ಶ್ರೀಮಂತ ಕೊಲೆ ಮಾಡಿ, ಮಾದನಹಿಪ್ಪರಗಾ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಇದನ್ನೂ ಓದಿ: ಹಿಂದೂ ಕಾರ್ಯಕರ್ತನ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮೂವರಿಗೆ ಚಾಕು ಇರಿತ

2 ವರ್ಷಗಳ ಹಿಂದೆ ಸೃಷ್ಟಿಯು ಶ್ರೀಮಂತನನ್ನು ಮದುವೆಯಾಗಿದ್ದಳು. ಗುರುವಾರ ಊರಿಗೆ ತೆರಳಿದ್ದ ಶ್ರೀಮಂತ, ರಾತ್ರಿ ಮನೆಗೆ ಹಿಂದಿರುಗಿದ್ದ. ಮನೆಯಲ್ಲಿ ಪತ್ನಿಯು ಅದೇ ಗ್ರಾಮದ ಖಾಜಪ್ಪನ ಜೊತೆ ಇರುವುದನ್ನು ಕಣ್ಣಾರೆ ಕಂಡು ಕೋಪಗೊಂಡ ಶ್ರೀಮಂತ ತಕ್ಷಣ ಮಾರಕಾಸ್ತ್ರಗಳಿಂದ ಇಬ್ಬರನ್ನೂ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಫಾಜಿಲ್ ಫೋಟೊ ಜೊತೆಗೆ ಸುಹಾಸ್ ಫೋಟೊ ಹಾಕಿ ಟಾರ್ಗೆಟ್ ಫಿಕ್ಸ್ ಮಾಡಿದ್ದ ಹಂತಕರು!

ಘಟನಾ ಸ್ಥಳಕ್ಕೆ ಮಾದನ ಹಿಪ್ಪರಗಾ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಶ್ರೀಮಂತನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article