ಸಂಬಂಧಿ ಪತ್ನಿಯನ್ನ ರೇಪ್ ಮಾಡ್ತಿದ್ರೆ, ರೆಕಾರ್ಡ್ ಮಾಡ್ಕೊಂಡ ಪತಿ

Public TV
1 Min Read

ಭುವನೇಶ್ವರ: ಪತಿಯ ಮುಂದೆಯೇ ಸ್ನೇಹಿತ ಮಹಿಳೆಯನ್ನು ಅತ್ಯಾಚಾರ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸಂಬಂಧಿಯೊಬ್ಬ ಪತ್ನಿಯನ್ನು ಅತ್ಯಾಚಾರ ಮಾಡುತ್ತಿದ್ದರೆ ಅದನ್ನು ಪಾಪಿ ಪತಿ ವಿಡಿಯೋ ಮಾಡಿಕೊಂಡಿರುವ ಆಘಾತಕಾರಿ ಘಟನೆ ಒಡಿಶಾದ ಕಿಯೋಂಜ್‍ಹರ್ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಜಿಲ್ಲೆಯ ಘಾಸಿಪುರ ಪ್ರದೇಶದಲ್ಲಿ ನಡೆದಿದೆ. ಪತಿಯ ಸಂಬಂಧಿಯೊಬ್ಬ ಆತನ ಮುಂದೆಯೇ ಪತ್ನಿಯನ್ನು ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಆಘಾತಕಾರಿ ವಿಷಯವೆಂದರೆ ಸಂಬಂಧಿ ಪತ್ನಿಯನ್ನು ಅತ್ಯಾಚಾರ ಮಾಡುತ್ತಿದ್ದರೆ ಪಾಪಿ ಪತಿ ಅದನ್ನು ತನ್ನ ಮೊಬೈಲಿನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ.

ಆರೋಪಿಗಳು ಇಬ್ಬರೂ ಕಂಠಪೂರ್ತಿ ಕುಡಿದ ಸ್ಥಿತಿಯಲ್ಲಿದ್ದರು ಎಂದು ಹೇಳಲಾಗಿದೆ. ಈ ವೇಳೆ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾಳೆ. ಇದನ್ನು ಕೇಳಿಸಿಕೊಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆಯನ್ನು ರಕ್ಷಿಸಿ ಆನಂದಪುರ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *