ಕೆಲಸಕ್ಕೆ ಹೋಗು ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ ಪತಿ

Public TV
1 Min Read

ಬೆಳಗಾವಿ: ಮನೆಯಲ್ಲೇ ಕಾಲಕಳೆಯುತ್ತಿದ್ದ ಪತಿಗೆ (Husband) ಕೆಲಸಕ್ಕೆ ಹೋಗುವಂತೆ ಹೇಳಿದಕ್ಕೆ ಪತ್ನಿಯನ್ನೇ (Wife) ಕೊಲೆಗೈದ ಪ್ರಕರಣ ಮೂಡಲಗಿಯ (Mudalagi) ನಾಗನೂರ ಗ್ರಾಮದಲ್ಲಿ ನಡೆದಿದೆ.

ಬಸವ್ವ (35) ಕೊಲೆಯಾದ ಮಹಿಳೆ. ಹಣಮಂತ ಹಿಡಕಲ್ ಕೊಲೆಗೈದ ಆರೋಪಿ ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳಿಂದ ಆರೋಪಿ ಕೆಲಸಕ್ಕೆ ಹೋಗದೆ ಮನೆಯಲ್ಲಿ ಇರುತ್ತಿದ್ದ. ಇದರಿಂದ ಬೇಸತ್ತ ಪತ್ನಿ ಕೆಲಸಕ್ಕೆ ಹೋಗುವಂತೆ ಹೇಳಿದ್ದಾಳೆ. ಈ ವೇಳೆ ಸಿಟ್ಟಿಗೆದ್ದ ಆರೋಪಿ ಕತ್ತು ಹಿಸುಕಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ತಾನೇ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಇದನ್ನೂ ಓದಿ: ಎಲ್ಲರಿಗೂ ಎಐ, ಎಲೆಕ್ಟ್ರಾನಿಕ್ಸ್‌, ಕಂಪ್ಯೂಟರ್‌ ಅನ್ನೋ ಆಲೋಚನೆ ಬೇಡ: ಹೆಚ್‌.ಆರ್.ರಂಗನಾಥ್‌

ಈ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಸಿಗ್ನಲ್ ಕಾರಣ- ಪ್ರಾಥಮಿಕ ವರದಿ

Share This Article