ಟೇಕಾಫ್ ಆಗಿ 16 ನಿಮಿಷಕ್ಕೆ ಲ್ಯಾಂಡ್ ಆಯ್ತು ಏರ್ ಇಂಡಿಯಾ ವಿಮಾನ

Public TV
1 Min Read

ಹೈದರಾಬಾದ್: ಇಲ್ಲಿನ ಫುಕೆಟ್‌ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ (IX 110) ತಾಂತ್ರಿಕ ದೋಷದಿಂದಾಗಿ ಟೇಕಾಫ್‌ ಆಗಿ 16 ನಿಮಿಷಕ್ಕೆ ಲ್ಯಾಂಡ್‌ ಆಗಿದೆ.

98 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೋಯಿಂಗ್ 737 ಮ್ಯಾಕ್ಸ್ 8 ವಿಮಾನ ಬೆಳಗ್ಗೆ 6:57 ಕ್ಕೆ ಸುರಕ್ಷಿತವಾಗಿ ವಾಪಸ್ ಬಂದಿಳಿದಿದೆ. ನಮ್ಮ ವಿಮಾನಗಳಲ್ಲಿ ಒಂದು ತಾಂತ್ರಿಕ ಸಮಸ್ಯೆಯಿಂದಾಗಿ ಟೇಕಾಫ್‌ ಆದ ಸ್ವಲ್ಪ ಸಮಯದ ನಂತರ ಹೈದರಾಬಾದ್‌ಗೆ ಹಿಂತಿರುಗಿತು. ಸಿಬ್ಬಂದಿ ಹೆಚ್ಚಿನ ಎಚ್ಚರಿಕೆಯಿಂದ ಹಿಂತಿರುಗಲು ನಿರ್ಧರಿಸಿದರು ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪರ್ಯಾಯ ವಿಮಾನ ವ್ಯವಸ್ಥೆ ಮಾಡಲಾಗಿದ್ದು, ವಿಮಾನವು ಅಲ್ಲಿಂದ ಹೊರಟಿದೆ. ವಿಳಂಬದ ಸಮಯದಲ್ಲಿ ಪ್ರಯಾಣಿಕರಿಗೆ ಉಪಹಾರ ಒದಗಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ. ನಮ್ಮ ಕಾರ್ಯಾಚರಣೆಯ ಪ್ರತಿಯೊಂದು ಅಂಶದಲ್ಲೂ ಸುರಕ್ಷತೆ ಪ್ರಮುಖ ಆದ್ಯತೆಯಾಗಿದೆ ಎಂದು ಪುನರುಚ್ಚರಿಸುತ್ತೇವೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ವಿಮಾನವು ಬೆಳಗ್ಗೆ 6:40 ಕ್ಕೆ ಹೊರಟಿತು. ಆದರೆ, ಹೈದರಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವು ನಿಮಿಷಗಳ ನಂತರ ಮತ್ತೆ ಇಳಿಯಿತು. ಅದು ಮಧ್ಯಾಹ್ನ 1:26 ಕ್ಕೆ ಫುಕೆಟ್‌ಗೆ ಮತ್ತೆ ಹೊರಟಿತು.

Share This Article