ಬೆಂಗಳೂರು: ವಿದೇಶದಿಂದ ಹೈಡ್ರೋ ಗಾಂಜಾ (Hydro Cannabis) ತರಿಸಿ ಸ್ಥಳೀಯರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ (Kerala) ಮೂಲದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸೌಗೇಶ್ ಹಾಗೂ ಅಲ್ತಾಫ್ ಎಂದು ಗುರುತಿಸಲಾಗಿದೆ. ಇಬ್ಬರು ಕೇರಳದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಬಂಧಿತರಿಂದ 5.75 ಕೋಟಿ ರೂ. ಮೌಲ್ಯದ 5 ಕೆಜಿ 700 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನ ಮಕ್ಕಳಿಂದ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ!
ಬಂಧಿತರ ಮೇಲೆ ಕೇರಳದಲ್ಲಿ ಎನ್ಡಿಪಿಎಸ್ ಕೇಸ್ ಇರುವುದು ಪತ್ತೆಯಾಗಿದೆ. ನಂದಿನಿ ಲೇಔಟ್ ಪೊಲೀಸರಿಂದ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ವೃದ್ಧನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಡ್ಯಾನ್ಸ್ – ಪುಡಿ ರೌಡಿಯ ವಿಕೃತಿ ಕ್ಯಾಮೆರಾದಲ್ಲಿ ಸೆರೆ

