ಬಿಜೆಪಿಯಲ್ಲಿ ಆ್ಯಕ್ಟಿವ್ ಆಗಿರುವವನು ನಾನೇ: ಜನಾರ್ದನ ರೆಡ್ಡಿ

Public TV
1 Min Read

ಹುಬ್ಬಳ್ಳಿ: ಸಂಪೂರ್ಣ ರಾಜಕೀಯಕ್ಕೆ ಮತ್ತೆ ಯಾವಾಗ ಬರ್ತಿರಾ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ, ಬಿಜೆಪಿಯಲ್ಲಿ ಆ್ಯಕ್ಟಿವ್ ಆಗಿರುವ ನಾಯಕ ನಾನೇ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವರು, ಸಮ್ಮಿಶ್ರ ಸರ್ಕಾರ ರಚನೆಯಾಗಿ ಕೇವಲ 100 ದಿನಗಳು ಕಳೆದಿವೆ. ಅಷ್ಟರಲ್ಲಿ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಮಾತನಾಡುವುದು ಸರಿಯಲ್ಲ. ಸಮಯ ಕಳೆದ ನಂತರ ಮಾತನಾಡುತ್ತೇನೆ ಎಂದು ತಿಳಿಸಿದ್ರು.

ರಾಜ್ಯದ ಜನತೆಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂಬ ಆಸೆ ಇತ್ತು. ಅದು ಸ್ವಲ್ಪದರಲ್ಲಿಯೇ ತಪ್ಪಿದೆ. ಸಮ್ಮಿಶ್ರ ಸರ್ಕಾರದ ಕಾರ್ಯವೈಖರಿಯನ್ನು ಸಾರ್ವಜನಿಕರು ಸಹ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಎಷ್ಟು ದಿನ ಆಡಳಿತ ನಡೆಸಲಿದೆ ಎಂಬುವುದನ್ನ ಕಾಲವೇ ನಿರ್ಣಯ ಮಾಡುತ್ತದೆ. ಸದ್ಯ ಬಿಜೆಪಿಯಲ್ಲಿ ನಿಮ್ಮ ಪಾತ್ರವೇನು ಎಂಬ ಪ್ರಶ್ನೆಗೆ ಉತ್ತರಿಸಲು ಇದೇ ವೇಳೆ ಸಚಿವರು ನಿರಾಕರಿಸಿದ್ರು.

ಗದಗ ಜಿಲ್ಲೆಯಲ್ಲಿ ಸಾಮೂಹಿಕ ಮದುವೆ ಮತ್ತು ಕಾಲೇಜು ಉದ್ಘಾಟನೆ ಕಾರ್ಯಕ್ರಮಗಳ ನಿಮಿತ್ತ ಬಂದಿದ್ದೇನೆ. ಗದಗನಿಂದ ನೇರವಾಗಿ ಬೆಳಗಾವಿಯ ಸವದತ್ತಿಯ ಕೆಲವು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೇನೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *