ಮೋದಿ ಸಿದ್ಧರಿದ್ರೆ ಅವರೊಂದಿಗೆ ಓಟದ ಸ್ಪರ್ಧೆಗೆ ನಾನು ರೆಡಿ: ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ಸಿದ್ಧರಿದ್ದರೆ ಅವರ ಜೊತೆಗಿನ ಓಟದ ಸ್ಪರ್ಧೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ (Tweet) ಮಾಡಿ ಸಕ್ರಿಯ ರಾಜಕಾರಣದಿಂದ ನಾನು ದೂರ ಸರಿದಿಲ್ಲ ಎಂದಿರುವ ಅವರು ಮೋದಿಗೆ ಈ ಚಾಲೆಂಜ್ ಹಾಕಿದ್ದಾರೆ.

ಟ್ವೀಟ್‍ನಲ್ಲೇನಿದೆ..? ಪ್ರಧಾನಿ ಅವರು ಏನನ್ನು ಹೇಳಲಿಕ್ಕೆ ಹೊರಟಿದ್ದಾರೆ? ಬಿ.ಎಸ್ ಯಡಿಯೂರಪ್ಪನವರನ್ನು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವಮಾನಕಾರಿಯಾಗಿ ಕಿತ್ತುಹಾಕಿದ ಬಿಜೆಪಿ (BJP), ಈಗ ಅವರನ್ನೇ ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿರುವುದಕ್ಕೆ ಕಾರಣ ಅವರ ಮೇಲಿನ ಗೌರವವೇ? ಅಥವಾ ಅನುಕಂಪ ಗಳಿಕೆಯ ತಂತ್ರವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ Vs ಮಾಜಿ ಪ್ರಧಾನಿ; ಮೋದಿ ಬರುವ ದಿನವೇ ಮಗನ ಪರ ಅಖಾಡಕ್ಕಿಳಿದ ದೊಡ್ಡಗೌಡ್ರು

ನಾನು ನಿವೃತ್ತಿಯಾಗುತ್ತೇನೆ ಎಂದು ಹೇಳುತ್ತಿರುವುದು ಚುನಾವಣಾ ರಾಜಕಾರಣದಿಂದಲೇ ಹೊರತು, ಸಕ್ರಿಯ ರಾಜಕಾರಣದಿಂದ ಅಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರುವಷ್ಟು ಆರೋಗ್ಯದಿಂದ ಇದ್ದೇನೆ. ನರೇಂದ್ರ ಮೋದಿಯವರು ಸಿದ್ಧ ಇದ್ದರೆ ಅವರ ಜೊತೆಯಲ್ಲಿ ಓಟದ ಸ್ಪರ್ಧೆಗೆ ನಾನು ಸಿದ್ಧ ಎಂದರು.

ಶನಿವಾರ ವಿಜಯಪುರದಲ್ಲಿ ಭಾಷಣ ಮಾಡಿದ್ದ ಪ್ರಧಾನಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ ಸಿದ್ದರಾಮಯ್ಯ ವಿರುದ್ಧವೂ ಮೋದಿ ಕಿಡಿಕಾರಿದ್ದರು. ಜನರ ಸಿಂಪತಿ ಗಿಟ್ಟಿಸುವ ಮೂಲಕ ಭಾವನಾತ್ಮಕವಾಗಿ ಜನರಲ್ಲಿ ಕಾಂಗ್ರೆಸ್ ನವರು ಮತ ಕೇಳುತ್ತಿದ್ದಾರೆ. ಆದರೆ ಮತದಾರರು ಒಬ್ಬ ಉತ್ಸಾಹಭರಿತ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ತಯಾರಾಗಿದ್ದಾರೆ ಎಂದು ಹೇಳಿದ್ದರು.

Share This Article