ತುಂಬಾ ಸಂತೋಷದಿಂದ ನಾನು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ: ಹೆಚ್‍ಡಿಡಿ

Public TV
2 Min Read

– ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು
– ಇಸ್ರೋ ಅಧ್ಯಕ್ಷರಿಗೆ ಮಾಜಿ ಪಿಎಂ ಅಭಿನಂದನೆ

ಬೆಂಗಳೂರು: ತುಂಬಾ ಸಂತೋಷದಿಂದಲೇ ನಾನು ಈ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ (HD Devegowda) ಹೇಳಿದ್ದಾರೆ.

ಗೌರವ ಡಾಕ್ಟರೇಟ್ (Honorary Doctorates) ಪ್ರದಾನ ಸ್ವೀಕರಿಸಿದ ಬಳಿ ಮಾತನಾಡಿದ ಹೆಚ್‍ಡಿಡಿ, ಬೆಂಗಳೂರು ವಿವಿ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನ ಭಂಡಾರ. ಉನ್ನತ ಶಿಕ್ಷಣದಲ್ಲಿ ಉತೃಷ್ಕೃತೆಯನ್ನು ಸಾಧಿಸಿದೆ. ಈ ವಿವಿ ಬಗ್ಗೆ ನನಗೆ ಅಪಾರ ಗೌರವ ಇದೆ. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು ಎಂದು ಹೇಳಿದರು.

ಶಿಕ್ಷಣ ಪುಸ್ತಕ ಜ್ಞಾನ, ಅಕ್ಷರ ಜ್ಞಾನ ಮಾತ್ರ ಅಲ್ಲ ವಿದ್ಯೆ ಹೃದಯವಂತಿಕೆ ಬೆಳೆಸಬೇಕು. ವಿದ್ಯಾರ್ಥಿ ಜೀವನ ತಪ್ಪಸ್ಸು ಇದ್ದಂತೆ. ವಿದ್ಯೆ ಒಬ್ಬನ ಜೀವನ ಕಟ್ಟಿಕೊಳ್ಳವುದು ಮಾತ್ರವಲ್ಲ, ದೇಶವನ್ನು ಸಮಾಜವನ್ನು ಕಟ್ಟುತ್ತದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಅಗತ್ಯ ಹೆಚ್ಚಿದೆ ಎಂದು ತಿಳಿಸಿದರು.

ಇದೇ ವೇಳೆ ಇಸ್ರೋ ಅಧ್ಯಕ್ಷ ಸೋಮನಾಥ್ (Isro Chairman S. Somanath)  ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಸಂದಿರುವುದು ಸಂತಸ ತಂದಿದೆ. ಇಸ್ರೋದ ಸಂಸ್ಥೆ ಇಂದು ಬಾಹ್ಯಕಾಶ ಕ್ಷೇತ್ರ ಭೂಪಟದಲ್ಲಿ ವಿಶ್ವಕ್ಕೆ ಪರಿಚಯ ಮಾಡಿ ಗೌರವ ತಂದಿದೆ ಎಂದರು.

ಬೆಂಗಳೂರು ವಿಶ್ವ ವಿದ್ಯಾಲಯದ 58ನೇ ಘಟಿಕೋತ್ಸವ ಸಂಬಂಧ ಇಂದು ಇಬ್ಬರು ಸಾಧಕರಿಗೆ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪಿಎಂ ಹೆಚ್ ಡಿ ದೇವೇಗೌಡ, ಇಸ್ರೋದ ಅಧ್ಯಕ್ಷ ಸೋಮನಾಥ್ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

28,871 ವಿದ್ಯಾರ್ಥಿಗಳು ಈ ಘಟಿಕೋತ್ಸವದಲ್ಲಿ ಪದವಿ ಪಡೆದಿದ್ದಾರೆ. ಕಾರ್ಯಕ್ರಮದಲ್ಲಿ ಝೆರೋದಾ ಸಂಸ್ಥೆಯ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್