ನವದೆಹಲಿ: ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂಬ ಬಗ್ಗೆ ನಾನು ಭರವಸೆ ನೀಡುತ್ತೇನೆ ಎಂದು ಮುಖ್ಯ ಚುನಾವಣಾ ಆಯುಕ್ತರಾದ ಎಕೆ ಜೋತಿ ಹೇಳಿದ್ದಾರೆ.
ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿರುವ ಅವರು, ಮತಯಂತ್ರಗಳ ಬಗ್ಗೆ ಎತ್ತಲಾದ ಪ್ರಶ್ನೆಗಳಿಗೆ ನಾವೀಗಾಗಲೇ ಮಾಧ್ಯಮಗಳಲ್ಲಿ ಉತ್ತರ ನೀಡಿದ್ದೇವೆ. ಗುಜರಾತ್‍ನಲ್ಲಿ ಎಲ್ಲಾ ಮತ ಕೇಂದ್ರಗಳಲ್ಲಿ ವಿವಿಪಿಎಟಿ (ವೋಟರ್ ವೇರಿಫೈಡ್ ಪೇಪರ್ ಆಡಿಟ್ ಟ್ರಯಲ್) ಇದ್ದವು. ಇದರ ಮೂಲಕ ಮತದಾರರು ತಾವು ಯಾರಿಗೆ ಮತ ಚಲಾಯಿಸಿದ್ದೇವೆಂದು ನೋಡಬಹುದಾಗಿತ್ತು. ಆದ್ದರಿಂದ ಈ ಬಗೆಗಿನ ಪ್ರಶ್ನೆಗಳು ಸರಿಯಲ್ಲ. ಇವಿಎಂಗಳಲ್ಲಿ ಅಕ್ರಮ ನಡೆದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ ಎಂದಿದ್ದಾರೆ.
ಗುಜರಾತ್‍ನಲ್ಲಿ ವಿಧಾನಸಭಾ ಚುನಾವಣೆಗೆ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಎಲ್ಲಾ ವ್ಯವಸ್ಥೆಗಳನ್ನ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬಹುನಿರೀಕ್ಷಿತ ಗುಜರಾತ್ ಹಾಗೂ ಹಿಮಾಚಲಪ್ರದೇಶ ಚುನಾವಣಾ ಫಲಿತಾಂಶ ಇಂದು ಹೊರಬೀಳುತ್ತಿದೆ. ಇತ್ತೀಚಿನ ಮಾಹಿತಿಯ ಪ್ರಕಾರ ಗುಜರಾತ್‍ನಲ್ಲಿ ಒಟ್ಟು 182 ಕ್ಷೇತ್ರಗಳಲ್ಲಿ ಬಿಜೆಪಿ-105 ಹಾಗೂ ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.
ಹಿಮಾಚಲಪ್ರದೇಶದಲ್ಲಿ 68 ಕ್ಷೇತ್ರಗಳಲ್ಲಿ ಬಿಜೆಪಿ 36 ಹಾಗೂ ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.