ಹಾಲಿನ ದರ ಏರಿಕೆ ಬಗ್ಗೆ ನನಗೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: KMF ನಿಂದ ಹಾಲಿನ ದರ ಏರಿಕೆ (Nandini Milk Price Hike) ಮಾಡಿರುವ ವಿಚಾರ ನನ್ನ ಗಮನಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಕೆಎಂಎಫ್‌ನಿಂದ ಹಾಲಿನ ದರ ಏರಿಕೆ ವಿಚಾರವಾಗಿ ಗೃಹ ಕಚೇರಿ ಕೃಷ್ಣದಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ, ಹಾಲಿನ ದರ ಏರಿಕೆ ಬಗ್ಗೆ ನನಗೆ ಗೊತ್ತಿಲ್ಲ. KMF ಅವರ ಜೊತೆ ಮಾತಾಡ್ತೀನಿ‌. ಹಾಲಿನ ದರ ಹೆಚ್ಚಳ ಮಾಡೋದು ಸರ್ಕಾರ ಅಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗ್ರಾಹಕರಿಗೆ ಕೆಎಂಎಫ್‌ ಶಾಕ್‌ – ನಂದಿನಿ ಹಾಲಿನ ದರ ಹೆಚ್ಚಳ – ಯಾವುದಕ್ಕೆ ಎಷ್ಟು?

ಕೆಎಂಎಫ್‌ನವರು ಬೇರೆ ರಾಜ್ಯದ ದರ ನೋಡಿಕೊಂಡು ದರ ಹೆಚ್ಚಳ ಮಾಡ್ತಾರೆ. ಬೇರೆ ರಾಜ್ಯದ ದರಕ್ಕೆ ಹೋಲಿಗೆ ಮಾಡಿದರೆ ನಮ್ಮಲ್ಲಿ ಕಡಿಮೆ ಇದೆ. ಆದರೂ ದರ ಏರಿಕೆ ಮಾಡಿರೋ ಬಗ್ಗೆ ನನಗೆ ಗೊತ್ತಿಲ್ಲ. ನಾನು KMF ಅಧ್ಯಕ್ಷರ ಜೊತೆ ಮಾತಾಡ್ತೀನಿ ಎಂದು ಮಾಹಿತಿ ನೀಡಿದರು.

ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ (KMF) ನಂದಿನಿ ಹಾಲಿನ ದರ ಹೆಚ್ಚಿಸಲಾಗಿದೆ. ಹಾಲಿನ ದರ ಪ್ರತಿ ಲೀಟರ್‌ಗೆ 2.10 ರೂ. ಹೆಚ್ಚಳ ಮಾಡಲಾಗಿದೆ. ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ.

Share This Article