ನಾನು ಹಿಟ್ಲರ್ ಅಲ್ಲ, ಆಪರೇಷನ್ ಕಮಲದ ಬಗ್ಗೆ ಗೊತ್ತಿಲ್ಲ: ರಮೇಶ್‍ಕುಮಾರ್

Public TV
1 Min Read

– ಆಡಿಯೋ ಕುರಿತು ನಾಳೆ ಸದನದಲ್ಲಿ ಚರ್ಚೆ
– ನಮ್ಮನ್ನ ನೋಡಿ ಜನ ಪಕ್ಕಕ್ಕೆ ಉಗಿದು ಹೋಗಬಾರದು

ರಾಯಚೂರು: ಆಪರೇಷನ್ ಕಮಲದ ಬಗ್ಗೆ ನನಗೆ ಗೊತ್ತಿಲ್ಲ. ನಾನು ಹಿಟ್ಲರ್ ಅಲ್ಲ. ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡ್ತೀನಿ ಎಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲ ಆಡಿಯೋ ಕುರಿತಂತೆ ನಾಳೆ ಸದನದಲ್ಲಿ ಚರ್ಚೆ ಮಾಡುತ್ತೇನೆ. ಯಾರು ಮಾರಾಟ ಆಗುತ್ತಾರೋ, ಯಾರು ದುಡ್ಡು ಕೊಡುತ್ತಾರೋ ಗೊತ್ತಿಲ್ಲ. ಆಪರೇಷನ್ ಕಮಲದ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ಪ್ರಸಕ್ತ ರಾಜಕೀಯ ಬೆಳವಣಿಗೆಗೆ ನೊಂದಿದ್ದೇನೆ. ಇನ್ನೊಬ್ಬರಿಗೆ ನೋವು ಕೊಟ್ಟು ಬದುಕಲು ನಾನು ಇಷ್ಟ ಪಡಲ್ಲ. ನಾವು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ನಮ್ಮನ್ನ ನೋಡಿ ಜನ ಪಕ್ಕಕ್ಕೆ ಉಗಿದು ಹೋಗಬಾರದು ಅಂತ ಬೇಸರ ವ್ಯಕ್ತಪಡಿಸಿದ ಅವರು, ಶಾಸಕರು ಸದನಕ್ಕೆ ಬರಲು ಆಗದಿದ್ರೆ ತಿಳಿಸಬೇಕು. ಗೌರವದಿಂದ ಸದನಕ್ಕೆ ಬರಬೇಕು ಎಂದು ಅವರಿಗೆ ತಿಳಿಯಬೇಕು. ಬರಲು ಆಗದಿದ್ದರೆ ಚುನಾವಣೆಗೆ ಯಾಕೆ ನಿಲ್ಲಬೇಕು ಎಂದು ಪ್ರಶ್ನಿಸಿದರು.

ರಾಜ್ಯದ್ದು ಮಾತ್ರವಲ್ಲ ದೇಶದ ರಾಜಕೀಯವೇ ಹಾಳಾಗಿದೆ. ಎಲ್ಲ ಭ್ರಷ್ಟಾಚಾರಕ್ಕೆ ಚುನಾವಣೆಯೇ ಗಂಗೋತ್ರಿ. ಕಾಯ್ದೆಗಳಲ್ಲಿ ಸುಧಾರಣೆಗಳನ್ನು ತರಬೇಕು. ಆದ್ರೆ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಜನ್ಮತಾಳಿದ ಮನುಷ್ಯನೇ ಕ್ರಮ ತೆಗೆದುಕೊಳ್ಳಲಿಲ್ಲ ಅಂತ ಪರೋಕ್ಷವಾಗಿ ಪ್ರಧಾನಿ ಮೋದಿಗೆ ರಮೇಶ್ ಕುಮಾರ್ ಇದೇ ವೇಳೆ ಟಾಂಗ್ ಕೊಟ್ಟರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *