ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಸ್‌ಪಿಪಿ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಪರಮೇಶ್ವರ್

By
1 Min Read

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎಸ್‌ಪಿಪಿ (SPP) ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಬದಲಾವಣೆ ಮಾಡೋದಾದ್ರೆ ಸರ್ಕಾರ ಮತ್ತು ಅಡ್ವೊಕೇಟ್ ಜನರಲ್, ಕಾನೂನು ತಜ್ಞರ ಸಲಹೆ ಪಡೆದು ಮುಂದುವರೆಯುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎಸ್‌ಪಿಪಿ ಬದಲಾವಣೆಗೆ ಒತ್ತಡ ಬರುತ್ತಿರುವ ವಿಚಾರ ನನಗೆ ಗೊತ್ತಿಲ್ಲ. ಯಾರೇ ಎಸ್‌ಪಿಪಿ ಆಗಿ ನೇಮಕಗೊಂಡರೂ ಸ್ಟ್ರಿಕ್ಟ್ ಆಗಿಯೇ ಇರಬೇಕು. ಕಾನೂನು ಪ್ರಕಾರವೇ ಕೆಲಸ ಮಾಡಬೇಕು. ಯಾರನ್ನೇ ನೇಮಕ ಮಾಡಿದರೂ ಎಲ್ಲರಿಗೂ ಒಂದೇ ಕಾನೂನು ಎಂದರು. ಇದನ್ನೂ ಓದಿ:‌ ಕೆಂಡದಂತ ಬಿಸಿಲು, ಬಿಸಿಗಾಳಿ ಹೊಡೆತಕ್ಕೆ ದೆಹಲಿಯಲ್ಲಿ 15 ಮಂದಿ ಸಾವು

ಈ ಪ್ರಕರಣದಲ್ಲಿ ಎಸ್‌ಪಿಪಿ ಬದಲಾವಣೆ ಆಗುತ್ತಾರೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಒಂದು ವೇಳೆ ಎಸ್‌ಪಿಪಿ ಬದಲಾವಣೆ ಮಾಡಿದರೂ ಕೂಡಾ ಅದರಲ್ಲಿ ತಪ್ಪೇನಿಲ್ಲ. ಆ ರೀತಿ ತೀರ್ಮಾನ ತೆಗೆದುಕೊಂಡರೆ ಏನಾದರೂ ಕಾರಣ ಇದ್ದೇ ಇರುತ್ತದೆ. ಆದರೆ ಈ ಕೇಸ್ ಸಡಿಲ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಯಾವ ಮುಲಾಜೂ, ಒತ್ತಡ ಇಲ್ಲದೇ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು.  ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ: ಪರಮೇಶ್ವರ್‌

Share This Article