ಬೆಳಗಾವಿ: ಉರುಸ್ ಮೆರವಣಿಗೆಯಲ್ಲಿ ‘ಐ ಲವ್ ಮುಹಮ್ಮದ್’ (I Love Muhammad) ಘೋಷಣೆ ಕೂಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮುಸ್ಲಿಂ ಯುವಕರು ಕಲ್ಲು ತೂರಾಟ (Stone Pelting) ನಡೆಸಿದ ಘಟನೆ ಬೆಳಗಾವಿ (Belagavi) ನಗರದ ಖಡಕ್ ಗಲ್ಲಿಯಲ್ಲಿ (Khadak Galli) ನಡೆದಿದೆ.
ಮಾಬುಸುಬಾನಿ ದರ್ಗಾದ ಉರುಸ್ ವೇಳೆ ‘ಐ ಲವ್ ಮುಹಮ್ಮದ್’ ಘೋಷಣೆ ಕೂಗಿದ ಹಿನ್ನೆಲೆ ಆಕ್ರೋಶ ವ್ಯಕ್ತವಾಗಿದೆ. ಪ್ರಶ್ನೆ ಮಾಡಿದ ಸ್ಥಳೀಯ ಹಿಂದೂ ನಿವಾಸಿಗಳ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿ ವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮಾರ್ಗದ ಮೂಲಕ ದರ್ಗಾಗೆ ಮೆರವಣಿಗೆ ಹೋಗುತ್ತಿತ್ತು. ಈ ವರ್ಷ ಅನುಮತಿ ಇಲ್ಲದೆಯೂ ಸಹ ಖಡಕ್ ಗಲ್ಲಿಗೆ ಮೆರವಣಿಗೆ ಎಂಟ್ರಿಯಾಗಿದೆ ಎನ್ನಲಾಗಿದೆ. ಮೆರವಣಿಗೆ ವೇಳೆ ‘ ಐ ಲವ್ ಮುಹಮ್ಮದ್’ ಎಂಬ ಘೋಷಣೆ ಕೂಗಿದ್ದಲ್ಲದೇ ಯಾವಾಗಲೂ ಬಾರದ ಮೆರವಣಿಗೆ ಈಗ ಯಾಕೆ ಬಂದಿದೆ? ತಮ್ಮ ಏರಿಯಾಗೆ ಬಂದು ಘೋಷಣೆ ಕೂಗಿದ್ದು ಯಾಕೆ ಎಂದು ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಸಾಗುತ್ತಿದ್ದ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ನಡೆದಿದೆ. ಬಳಿಕ ತಲ್ವಾರ್ ಕೂಡ ಪ್ರದರ್ಶನ ಮಾಡಿ ಗೂಂಡಾವರ್ತನೆ ತೋರಲಾಗಿದೆ. ಇದನ್ನೂ ಓದಿ: ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಹಮಾಸ್ ಒಪ್ಪಿಗೆ
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೆರವಣಿಗೆಯನ್ನು ಸ್ಥಳದಿಂದ ಕಳುಹಿಸಿದ್ದಾರೆ. ಏಕಾಏಕಿ ಮೆರವಣಿಗೆ ಬಂದವರು ಮತ್ತು ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಸ್ಥಳದಲ್ಲಿ ಬಿಗುವಿಣ ವಾತಾವರಣ ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅ.9ರಂದು ಹಾಸನಾಂಬ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ
ಇನ್ನು ಪ್ರಕರಣ ಸಂಬಂಧ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಸ್ಥಳೀಯರು, ಪೊಲೀಸರಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಡಕ್ ಗಲ್ಲಿಯಲ್ಲಿ ಎರಡು ಕೋಮಿನ ಜನರ ನಡುವೆ ಘರ್ಷಣೆ ನಡೆದಿದೆ. ಒಂದು ಧಾರ್ಮಿಕ ಕಾರ್ಯಕ್ರಮ ಇತ್ತು. ಒಂದು ರೂಟ್ ಫಿಕ್ಸ್ ಇದೆ, ಅದನ್ನ ಬಿಟ್ಟು ಬೇರೆ ರೂಟ್‌ನಲ್ಲಿ ಬಂದಿದ್ದಾರೆ. ಇದನ್ನ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಘರ್ಷಣೆ ಆಗಿದೆ. ಸ್ಥಳೀಯರು ಕಲ್ಲು ತೂರಾಟ ಆಗಿದೆ ಅಂತಾ ಕೇಸ್ ಕೊಟ್ಟಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಕ್ರಮ ಆಗುತ್ತೆ. ಯಾರಿಗೂ ಗಾಯ ಆಗಿಲ್ಲ, ಎರಡು ಕೋಮಿನ ಹಿರಿಯರು ಕೂಡಲೇ ಸರಿಪಡೆಸಿದ್ದಾರೆ. ಓರಿಜನಲ್ ರೂಟ್ ಬಿಟ್ಟು ಬಂದು ತಪ್ಪಾಗಿದೆ. ‘ಐ ಲವ್ ಮುಹಮ್ಮದ್’ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿಂತೆ ಮಹಾನಗರ ಪಾಲಿಕೆ ಅವರಿಗೆ ಹೇಳುತ್ತೇವೆ. ಅನುಮತಿ ಪಡೆದು ಬ್ಯಾನರ್ ಹಾಕಲು ಸೂಚನೆ ನೀಡುತ್ತೇವೆ ಎಂದು ತಿಳಿಸಿದರು. ಘಟನೆ ಸಂಬಂಧ 11 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಕಲಬುರಗಿಗೂ ಕಾಲಿಟ್ಟ ಐ ಲವ್ ಮೊಹಮ್ಮದ್ ಬ್ಯಾನರ್ ವಿವಾದ: ಹಿಂದೂ ಸಂಘಟನೆಗಳಿಂದ ಆಕ್ರೋಶ