ಅನಂತ್‌ ಅಂಬಾನಿ ಕೈಯಲ್ಲಿದ್ದ ವಾಚ್‌ಗೆ ಮನಸೋತ ಜುಕರ್‌ಬರ್ಗ್‌ ದಂಪತಿ!

Public TV
2 Min Read

ಗಾಂಧೀನಗರ: ಗುಜರಾತ್‌ನ ಜಾಮ್‌ನಗರದಲ್ಲಿ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಅವರ ವಿವಾಹಪೂರ್ವ ವೈಭವದ ಆಚರಣೆ ಮನೆ ಮಾಡಿದ. ಈ ನಡುವೆ ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ( Meta CEO Mark Zuckerberg) ಮತ್ತು ಪತ್ನಿ ಪ್ರಿಸ್ಸಿಲ್ಲಾ ಚಾನ್ (Priscilla Chan) ಅವರು ಅನಂತ್ ಅಂಬಾನಿಯ ದುಬಾರಿ ಬೆಲೆಯ ವಾಚ್ ಬಗ್ಗೆ ವಿಚಾರಿಸಿರುವುದು ಅತಿಥಿಗಳ ಗಮನವನ್ನು ಸೆಳೆದಿದೆ.

ಹೌದು. ಮಾರ್ಕ್ ಜುಕರ್‌ಬರ್ಗ್ ತಮ್ಮ ಪತ್ನಿ ಪ್ರಿಸ್ಸಿಲ್ಲಾ ಚಾನ್ ಜೊತೆ ಅನಂತ್ ಅಂಬಾನಿ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಭಾಗಿ ಆದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋದಲ್ಲಿ ಜುಕರ್‌ಬರ್ಗ್ ಪತ್ನಿ ಪ್ರಿಸ್ಸಿಲ್ಲಾ ಚಾನ್ ಅವರು ಅನಂತ್ ಅಂಬಾನಿ ಅವರ ಕೈಯಲ್ಲಿರುವ ದುಬಾರಿ ವಾಚ್‌ (Watch) ನೋಡಿ ಮಾರುಹೋಗಿದ್ದಾರೆ. ಇದನ್ನೂ ಓದಿ: ಪುತ್ರ ಅನಂತ್ ಪ್ರೀ-ವೆಡ್ಡಿಂಗ್‌ನಲ್ಲಿ ನೀತಾ ಅಂಬಾನಿ ಡ್ಯಾನ್ಸ್

ವೀಡಿಯೋದಲ್ಲಿ ಏನಿದೆ..?: ಜುಕರ್‌ಬರ್ಗ್ ಮತ್ತು ಅವರ ಪತ್ನಿ ಪ್ರಿಸ್ಸಿಲ್ಲಾ ಅವರೊಂದಿಗೆ ವರ ಅನಂತ್ ಅವರು ನಿಂತುಕೊಂಡು ಮಾತನಾಡುತ್ತಿದ್ದರು. ಹೀಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಜುಕರ್‌ ಬರ್ಗ್‌ ಅವರ ಪತ್ನಿಯ ಕಣ್ಣಿಗೆ ಅನಂತ್‌ ಅವರ ವಾಚ್‌ ಬಿದ್ದಿದೆ. ಅಲ್ಲದೆ ಅವರಿಗೆ ತುಂಬಾ ಇಷ್ಟವಾಗುತ್ತೆ. ಹೀಗಾಗಿ ಅವರು ವಾಚ್‌ ತುಂಬಾ ಅದ್ಭುತವಾಗಿದೆ ಎಂದು ಹೇಳುತ್ತಾರೆ. ಈ ವೇಳೆ ಜುಕರ್‌ ಬರ್ಗ್‌ ಅವರು.. ಹೌದು. ತುಂಬಾ ಚೆನ್ನಾಗಿದೆ. ನಾನು ಈಗಾಗಲೇ ಅವರಿಗೆ ಹೇಳಿದೆ ಎನ್ನುತ್ತಾರೆ. ಈ ವೇಳೆ ಪ್ರಿಸಿಲ್ಲಾ, ಈ ವಾಚ್​​ ಅನ್ನು ಯಾವ ಕಂಪನಿ ತಯಾರಿಸಿದೆ? ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಅನಂತ್, ರಿಶಾರ್​ ಮಿಲ್ ಕಂಪನಿ ಎಂದು ಹೇಳಿದ್ದಾರೆ.

ಅನಂತ್ ಕೈಯಲ್ಲಿದ್ದ ವಾಚ್ ನೋಡಿ ಜುಕರ್​​ಬರ್ಗ್ ಅವರ ಮನಸ್ಸು ಬದಲಾಗಿದೆ. ಹೀಗಾಗಿ ಮಾತು ಮುಂದವರಿಸಿದ ಅವರು, ನಿಮಗೆ ಗೊತ್ತಾ ನಾನು ಎಂದಿಗೂ ವಾಚ್​​ಗಳನ್ನು ಖರೀದಿಸಲು ಬಯಸಲಿಲ್ಲ. ಆದರೆ ಅನಂತ್‌ ಅವರ ಕೈಯಲ್ಲಿದ್ದ ವಾಚ್ ನೋಡಿ ನನ್ನ ಮನಸ್ಸು ಬದಲಾಯಿತು. ವಾಚ್ ಚೆನ್ನಾಗಿ ಕಾಣುತ್ತದೆ ಎಂದಿದ್ದಾರೆ. ಈ ವೀಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗುತ್ತಿದೆ. ಅಲ್ಲದೆ ಹಲವಾರು ಪರ-ವಿರೋಧ ಕಾಮೆಂಟ್‌ಗಳು ಬರುತ್ತಿವೆ.

ವಾಚ್‌ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಿ: ರಿಶಾರ್​ ಮಿಲ್ (Richard Mille) ಅತ್ಯಂತ ದುಬಾರಿ ವಾಚ್​​ಗಳನ್ನು ತಯಾರಿಸುತ್ತದೆ. ಇದು ಸ್ವಿಜರ್​ಲೆಂಡ್​ನ ಕಂಪನಿ ಆಗಿದೆ. ಅನಂತ್ ಅಂಬಾನಿ ಕೈಯಲ್ಲಿದ್ದ ವಾಚ್​ ಬೆಲೆ ಬರೋಬ್ಬರಿ 14 ಕೋಟಿ ರೂಪಾಯಿ ಎನ್ನಲಾಗಿದೆ.

Share This Article