ಉಪರಾಷ್ಟ್ರಪತಿ ಚುನಾವಣೆ – ನಿವೃತ್ತ ನ್ಯಾ. ಬಿ.ಸುದರ್ಶನ್ ರೆಡ್ಡಿ ಇಂಡಿಯಾ ಒಕ್ಕೂಟದ ಅಭ್ಯರ್ಥಿ

Public TV
2 Min Read

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ಹಿನ್ನಲೆ ಇಂಡಿಯಾ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಆಂಧ್ರಪ್ರದೇಶ ಮೂಲದ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ (Sudershan Reddy) ಅವರನ್ನು ಅಭ್ಯರ್ಥಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಘೋಷಿಸಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ಅವರು ಭಾರತದ ಸುಪ್ರೀಂಕೋರ್ಟ್ನ ಮಾಜಿ ನ್ಯಾಯಮೂರ್ತಿಯಾಗಿದ್ದರು (Former Supreme Court judge). ಅವರು 2008 ರಿಂದ 2011ರವರೆಗೆ ಸುಪ್ರೀಂಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮುಂಚೆ, ಅವರು ಆಂಧ್ರಪ್ರದೇಶ ಹೈಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್

ನ್ಯಾಯಮೂರ್ತಿ ರೆಡ್ಡಿ ಅವರು, ತಮ್ಮ ವೃತ್ತಿಜೀವನದಲ್ಲಿ ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದ್ದಾರೆ. ವಿಶೇಷವಾಗಿ ಸಾಮಾಜಿಕ ನ್ಯಾಯ, ಮಾನವ ಹಕ್ಕುಗಳು, ಮತ್ತು ಸಂವಿಧಾನಿಕ ವಿಷಯಗಳಿಗೆ ಸಂಬಂಧಿಸಿದ ಆದೇಶ ನೀಡಿದ್ದಾರೆ. ಅವರ ಕಾನೂನು ಜ್ಞಾನ ಮತ್ತು ನ್ಯಾಯಾಂಗದ ಸೇವೆಯಿಂದಾಗಿ ಅವರು ಗುರುತಿಸಿಕೊಂಡಿದ್ದಾರೆ. ಇದನ್ನೂ ಓದಿ: ನೇಮಕಾತಿ ಪರೀಕ್ಷೆಗಳ ಏಕರೂಪ ಶುಲ್ಕ; ಪ್ರಾಥಮಿಕ ಹಂತಕ್ಕೆ 100 ರೂ., ಮುಖ್ಯ ಪರೀಕ್ಷೆ ಉಚಿತ

ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನು ಘೋಷಿಸಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಮುಂಬರುವ ಉಪರಾಷ್ಟ್ರಪತಿ ಚುನಾವಣೆಯು ಸೈದ್ಧಾಂತಿಕ ಯುದ್ಧವಾಗಿದೆ. ಎಲ್ಲಾ ವಿರೋಧ ಪಕ್ಷಗಳು ನಮ್ಮ ಜೊತೆಗಿವೆ. ಪ್ರಜಾಪ್ರಭುತ್ವ ಮೌಲ್ಯಗಳು ದಾಳಿಗೆ ಒಳಗಾಗಿವೆ. ಎಲ್ಲಾ ವಿರೋಧ ಪಕ್ಷಗಳು ಒಂದೇ ಹೆಸರಿಗೆ ಒಪ್ಪಿಗೆ ನೀಡಿರುವುದು ನನಗೆ ಸಂತೋಷ ತಂದಿದೆ. ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಸಾಧನೆಯಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಆಯ್ಕೆ ಬಗ್ಗೆ ಮಾತನಾಡಿದ ನ್ಯಾ.ಸುದರ್ಶನ್ ರೆಡ್ಡಿ, ಎನ್‌ಡಿಎ ಸೇರಿದಂತೆ ಎಲ್ಲಾ ಪಕ್ಷಗಳು ನನ್ನನ್ನು ಬೆಂಬಲಿಸುವಂತೆ ನಾನು ಮನವಿ ಮಾಡುತ್ತೇನೆ. ವಿರೋಧ ಪಕ್ಷದ ಅಭ್ಯರ್ಥಿಯಾಗಿ, ಭಾರತದ 60% ರಷ್ಟು ಪ್ರತಿನಿಧಿಸುವುದಾಗಿ ತಿಳಿಸಿ ಮುಂಬರುವ ಚುನಾವಣೆಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ

ಮೂಲಗಳ ಪ್ರಕಾರ, ಆಂಧ್ರಪ್ರದೇಶದ ಎನ್‌ಡಿಎ ಮಿತ್ರಪಕ್ಷಗಳಾದ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ಪವನ್ ಕಲ್ಯಾಣ್ ಅವರ ಜನಸೇನಾ ಮೇಲೆ ಒತ್ತಡ ಹೇರಲು ಪ್ರತಿಪಕ್ಷಗಳು ನ್ಯಾಯಮೂರ್ತಿ ರೆಡ್ಡಿ ಅವರನ್ನು ಆಯ್ಕೆ ಮಾಡಿಕೊಂಡಿವೆ. ಎನ್‌ಡಿಎ ಆಯ್ಕೆಯ ಹಿಂದೆ ಈಗಾಗಲೇ ತಮ್ಮ ಬಲವನ್ನು ಹಾಕಿದ್ದ ಬಿಆರ್‌ಎಸ್ ಮತ್ತು ವೈಎಸ್‌ಆರ್‌ಸಿಪಿಯಂತಹ ಇತರ ತೆಲುಗು ಪಕ್ಷಗಳು ಸಹ ತಮ್ಮ ಆಯ್ಕೆಗಳನ್ನು ಪುನರ್ ವಿಮರ್ಶಿಸುತ್ತಿರಬಹುದು.

ಬಿಜೆಪಿ ಎನ್‌ಡಿಎ ಅಭ್ಯರ್ಥಿಯಾಗಿ ಸಿಪಿ ರಾಧಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ. ಇಂದು ನಡೆದ ಸಂಸದೀಯ ಸಭೆಯಲ್ಲಿ ಎಲ್ಲ ಮೈತ್ರಿ ಪಕ್ಷದ ಸಂಸದರು ಹಾಗೂ ವಿರೋಧ ಪಕ್ಷಗಳು ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದರು. ಈ ನಡುವೆ ಇಂಡಿಯಾ ಒಕ್ಕೂಟ ತನ್ನ ಪ್ರತಿಸ್ಪರ್ಧಿ ಅಭ್ಯರ್ಥಿಯನ್ನು ಘೋಷಿಸಿದೆ.

Share This Article