ಬೀದರ್: ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ನಾನು ಯಾವತ್ತೂ ಫೋನ್ ಮಾಡಿಲ್ಲ. ಸಾಧ್ಯವಾದಷ್ಟು ವಸ್ತುನಿಷ್ಠೆ, ಸತ್ಯವನ್ನು ಜನರ ಮುಂದೆ ಇಡೋ ಕೆಲಸ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.
ಬೀದರ್‌ನಲ್ಲಿ ನಡೆದ 40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತ ಸಮ್ಮೇಳನವನ್ನು ಉದ್ಘಾಟಿಸಿ, ಮಾತನಾಡಿದ ಅವರು, ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು. ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಸುದ್ದಿಯಿಂದ ಸಮಾಜಕ್ಕೆ ಏನಾದರೂ ಪ್ರಯೋಜನವಾಗಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು… pic.twitter.com/OtqRkUjvv2
— Siddaramaiah (@siddaramaiah) April 11, 2026
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ. ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದರು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು. ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು. ಪತ್ರಕರ್ತರು ಚಲನಶಕ್ತಿಯ ರೀತಿ ಕೆಲಸ ಮಾಡಬೇಕು ಎಂದು ತಿಳಿಸಿದರು.ಇದನ್ನೂ ಓದಿ: ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್ ನಿಯೋಗ


