ಕಾಂಗ್ರೆಸ್‌ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಮೋದಿ ವ್ಯಂಗ್ಯ

By
1 Min Read

ನವದೆಹಲಿ: ಪ್ರತಿಪಕ್ಷಗಳ ಚಿಂತನೆ ಹಳೆಯದಾಗಿದೆ ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ವ್ಯಂಗ್ಯವಾಡಿದ್ದಾರೆ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಭಾಷಣ ಮಾಡಿದ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಮ್ಮ ಭಾಷಣದಲ್ಲಿ ಭಾರತದ ಸಾಮರ್ಥ್ಯ, ಶಕ್ತಿ ಮತ್ತು ಉಜ್ವಲ ಭವಿಷ್ಯದ ಬಗ್ಗೆ ಮಾತನಾಡಿದರು. ಅಧ್ಯಕ್ಷೆ ದ್ರೌಪದಿ ಮುರ್ಮು ಅವರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದರು. ಇದನ್ನೂ ಓದಿ: ಗ್ಯಾರಂಟಿಯನ್ನು ಪೂರ್ಣ ಜಾರಿ ಮಾಡದೇ ಕೇಂದ್ರದ ಮೇಲೆ ಗೂಬೆ: ವಿಜಯೇಂದ್ರ ಕಿಡಿ

ಕಾಂಗ್ರೆಸ್ ರಾಜ್ಯಸಭಾ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಬಿಜೆಪಿ 400 ಸ್ಥಾನ ಗೆಲ್ಲಲಿದೆ ಎಂಬ ಮಾತನ್ನು ಉಲ್ಲೇಖಿಸಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ದಾಟುವುದಿಲ್ಲ ಎಂಬ ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಇತ್ತೀಚಿನ ಹೇಳಿಕೆಯನ್ನು ಪ್ರಸ್ತಾಪಿಸಿ ಕಾಲೆಳೆದರು.

ಅತ್ತ ಕಾಂಗ್ರೆಸ್‌ 40 ಸ್ಥಾನಗಳಲ್ಲಿ ಮಾತ್ರ ಗೆಲ್ಲುತ್ತದೆ ಎಂದು ಮಮತಾ ಬ್ಯಾನರ್ಜಿ (Mamata Banerjee) ಹೇಳಿದ್ದಾರೆ. ಆದರೆ ಕಾಂಗ್ರೆಸ್‌ ಈ ಬಾರಿ ಕನಿಷ್ಠ 40 ಸೀಟುಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳುವ ಮೂಲಕ ವ್ಯಂಗ್ಯವಾಡಿದರು.

ನಾನು ಖರ್ಗೆ ಜೀ ಅವರಿಗೆ ನನ್ನ ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ನಾನು ಆ ದಿನ ಬಹಳ ಗಮನ ಮತ್ತು ಆನಂದದಿಂದ ಅವರ ಮಾತುಗಳನ್ನು ಕೇಳುತ್ತಿದ್ದೆ. ಲೋಕಸಭೆಯಲ್ಲಿ ನಾವು ಕಳೆದುಕೊಂಡಿದ್ದ ಮನರಂಜನೆಯ ಕೊರತೆಯನ್ನು ಅವರು ರಾಜ್ಯಸಭೆಯಲ್ಲಿ  ನೀಡಿದರು ಎಂದರು.

 

Share This Article