ಸಿಎಂ, ಡಿಸಿಎಂ ನಿಜವಾದ ಕಾನೂನು ಪಾಲಕರಾಗಿದ್ರೆ ನಾನು ಸಾಷ್ಟಾಂಗ ನಮಸ್ಕಾರ ಮಾಡ್ತೇನೆ – ಅಶ್ವಥ್ ನಾರಾಯಣ

Public TV
2 Min Read

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ನಿಜವಾದ ಕಾನೂನು ಪಾಲಕರಾಗಿದ್ದರೆ ನಾನು ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ (Ashwath Narayana) ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು (ಡಿ.02) ಪೊಲೀಸರು ಚಂದ್ರಶೇಖರ ಸ್ವಾಮೀಜಿಗಳ ಹೇಳಿಕೆ ಪಡೆಯುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ, ಡಿಸಿಎಂ, ಅವರ ಪಕ್ಷದ ಪದಾಧಿಕಾರಿಗಳಿಗೆ ಕಾನೂನು ಯಾವುದೋ ಒಂದು ಸಂದರ್ಭದಲ್ಲಿ ನೆನಪಾಗುತ್ತದೆ. ಅದಕ್ಕಾಗಿ ಮನಬಂದಂತೆ, ಇಷ್ಟ ಬಂದಂತೆ ಸಿಎಂ, ಡಿಸಿಎಂ ಮಾತನಾಡುತ್ತಾರೆ. ಇವರೇ ಈ ರೀತಿ ಮಾತನಾಡಿದರೆ ಇವರ ಕೆಳಗಿರುವವರು ಇನ್ನು ಹೇಗೆ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದನ್ನೂ ಓದಿ: ಆನೇಕಲ್ | ಸಿಲಿಂಡರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಗಂಭೀರ

ಇನ್ನೂ ಇವರಿಗೆ ವಕ್ಫ್ ವಿಚಾರದಲ್ಲಿ ಬಾಯಿ ಇಲ್ಲ. ಚಂದ್ರಶೇಖರ ಸ್ವಾಮೀಜಿಗಳು ಇಡೀ ಸಮುದಾಯಕ್ಕೆ ಆಗಿರುವ ಅನ್ಯಾಯ ಕುರಿತು ಹೇಳಿದರು. ನಿಮ್ಮ ಓಲೈಕೆ ರಾಜಕಾರಣ ಕಂಡು ಮಾತನಾಡಿದರು. ಮಾರನೇ ದಿನ ವಿಷಾದ ವ್ಯಕ್ತಪಡಿಸಿದ್ದರು. ಆದರೆ ನೀವು ಪಾಕಿಸ್ತಾನ ಜಿಂದಾಬಾದ್ ಹೇಳಿಕೆಗೆ ನಿಮ್ಮ ಸಂಸದರ ವಿರುದ್ಧ ಕ್ರಮ ತೆಗೆದುಕೊಂಡ್ರಾ? ಕಾನೂನು ಎಲ್ಲರಿಗೂ ಒಂದೇ ಎಂದು ಹೇಳುತ್ತೀರಾ? ನೀವು ನಿಜವಾದ ಕಾನೂನು ಪಾಲಕರೇ ಆಗಿದ್ದರೆ ನಾನು ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನಿಮ್ಮ ಹಾಗೆ ಸ್ವಾಮೀಜಿಗಳು ಭಂಡರಲ್ಲ ಕೇಸ್ ಹಾಕಿದೀರ, ಬನ್ನಿ ಹೇಳಿಕೆ ತಗೊಳ್ಳಿ ಎಂದಿದ್ದಾರೆ ಸರ್ಕಾರದ ನಡೆಯನ್ನು ಜನ ಒಪ್ಪುವುದಿಲ್ಲ. ಹೋಗಿ ಮಠದಲ್ಲೇ ಉತ್ತರ ಪಡೆದುಕೊಳ್ಳಿ. ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಂಡಿದ್ದಾರೆ. ಹಿಂದೆ ಒಕ್ಕಲಿಗ ಸಮಾವೇಶದಲ್ಲಿ ಪೆನ್ನು ಪೇಪರ್ ಕೊಡಿ ಎಂದು ಹೇಳಿದ್ದಿರಿ ಈಗ ಏನಾಯ್ತು? ನಿಮ್ಮ ಬೆದರಿಕೆಗೆ ಸಮಾಜ ಹೆದರಲ್ಲ, ಕಾನೂನು ಪಾಲನೆ ಏನು ಅಂತ ನಮಗೂ ಗೊತ್ತಿದೆ ಎಂದು ಕಿಡಿಕಾರಿದರು.

ಇದೇ ವೇಳೆ ಯತ್ನಾಳ್‌ಗೆ ಶೋಕಾಸ್ ನೋಟಿಸ್ ವಿಚಾರವಾಗಿ ಮಾತನಾಡಿ, ವರಿಷ್ಠರು ನೋಟಿಸ್ ಕೊಟ್ಟಿದ್ದಾರೆ. ಸಂಬಂಧಪಟ್ಟವರು ನೋಟಿಸ್‌ಗೆ ಉತ್ತರ ಕೊಡಲಿದ್ದಾರೆ. ಎಲ್ಲರೂ ಪಕ್ಷದ ಚೌಕಟ್ಟಿನಲ್ಲಿ ಇರಬೇಕಾಗುತ್ತದೆ. ಒಗ್ಗಟ್ಟು, ಶಿಸ್ತು ಕಾಪಾಡಿಕೊಳ್ಳುವುದು ಎಲ್ಲರಿಗೂ ಅನ್ವಯ ಆಗುತ್ತದೆ. ನೋಟಿಸ್‌ಗೆ ಸಂಬಂಧಪಟ್ಟವರು ಉತ್ತರಿಸುತ್ತಾರೆ ಎಂದು ತಿಳಿಸಿದರು.ಇದನ್ನೂ ಓದಿ: ಉಪೇಂದ್ರ ನಟನೆಯ ‘ಯುಐ’ ವಾರ್ನರ್‌ ರಿಲೀಸ್

Share This Article