ಪ್ರಧಾನಿ ಮೋದಿಗೆ ಕ್ಲಾಸ್ ತೆಗೆದುಕೊಂಡಿದ್ದೇನೆ – ಮಲ್ಲಿಕಾರ್ಜುನ ಖರ್ಗೆ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರವ ಆಪರೇಷನ್ ಕಲಮದ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದೇನೆ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನಗರದಲ್ಲಿ ನಡೆದ ರಾಜ್ಯ ಆದಿ ಜಾಂಬವ ಅಭಿವೃದ್ಧಿ ನಿಗಮ ಲೋಕಾರ್ಪಣೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ನಿವಾಸದಲ್ಲಿ ನಿನ್ನೆ ಸಭೆ ನಡೆದಿತ್ತು. ಈ ವೇಳೆ ಲೌಕಿಕವಾಗಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಅಂತ ಕೇಳಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ನಾನು, ಕಾಂಗ್ರೆಸ್‍ನವರು ಬಿಜೆಪಿ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರಂತೆ. ಹೀಗಾಗಿ ಎಲ್ಲರೂ ಒಂದು ಕಡೆ ಸೇರಿದ್ದೇವೆ ಅಂತ ನಿಮ್ಮ ಶಾಸಕರು ಹೇಳುತ್ತಿದ್ದಾರೆ. ಅವರು ಗಟ್ಟಿಯಾಗಿದ್ದರೆ, ಒಗ್ಗಟ್ಟಾಗಿದ್ದರೆ ಗುರುಗ್ರಾಮದಲ್ಲಿ ಯಾಕೆ ಇರಬೇಕು ಅಂತ ಪ್ರಧಾನಿ ಅವರಿಗೆ ಪ್ರಶ್ನಿಸಿದ್ದೇನೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏನೇ ಹೇಳಲಿ, ಅವರು ಮಾಡಿದ್ದು ಸರಿಯಲ್ಲ. ನಿಮ್ಮವರು ಮೈತ್ರಿ ಸರ್ಕಾರ ಕೆಡವಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ಯಶಸ್ವಿ ಆಗಲ್ಲ. ಪ್ರಜಾಪ್ರಭುತ್ವದಲ್ಲಿ ಇದನ್ನೆಲ್ಲ ಮಾಡುವುದು ಉತ್ತಮ ಬೆಳವಣಿಗೆಯಲ್ಲ. ಇದನ್ನು ತಡೆಯುವ ಮೂಲಕ ಪ್ರಜಾಪ್ರಭುತ್ವದ ತತ್ವಗಳು ಉಳಿಸಬೇಕು ಎಂದು ಪ್ರಧಾನಿ ಮೋದಿ ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದರು.

ಗೋವಾ, ಅರುಣಾಚಲ ಪ್ರದೇಶ, ಮಣಿಪುರ ಹಾಗೂ ಉತ್ತರಾಖಂಡ್ ಗಳಲ್ಲಿ ಬಿಜೆಪಿಯವರು ಪಕ್ಷ ಒಡೆದು ಸರ್ಕಾರ ರಚಿಸಿದರು. ಅಲ್ಲಿ ಹಾಗೆ ಮಾಡಿದ್ದರಿಂದಲೇ ದೇಶದ ಬೇರೆ ರಾಜ್ಯಗಳಲ್ಲಿಯೂ ಅಸ್ಥಿರತೆ ಮುಂದುವರಿಯುತ್ತಿದೆ. ಇದನ್ನು ಬೇರೆಯವರು ಕೂಡ ಅನುಕರಣೆ ಮಾಡುತ್ತಾರೆ. ಸದ್ಯ ಕರ್ನಾಟಕದಲ್ಲೂ ಇದೆ ಆಗಿದ್ದು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *