ಈಗಾಗ್ಲೇ 50 ಲಕ್ಷ ಕೊಟ್ಟಿದ್ದು, ಉಳಿದ ಹಣವನ್ನೂ ವಾಪಸ್ ಮಾಡ್ತೀನಿ: ಹಾಲಶ್ರೀ ಹೈಡ್ರಾಮಾ

By
2 Min Read

ಬೆಂಗಳೂರು: ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿ ಹಾಲಶ್ರೀ (Halashree) ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹೈಡ್ರಾಮಾ ಮಾಡಿದ್ದಾರೆ.

ಗೋವಿಂದ ಬಾಬು ಪೂಜಾರಿಗೆ (Govinda Babu Poojary) ನಾನು ಈಗಾಗಲೇ 50 ಲಕ್ಷ ಕೊಟ್ಟಿದ್ದು, ಉಳಿದ ಹಣವನ್ನೂ ವಾಪಸ್ ಮಾಡ್ತೀನಿ ಎಂದು ಹೇಳಿದ್ದಾರೆ. ಗೋವಿಂದಬಾಬುರನ್ನು ಪರಿಚಯ ಮಾಡಿಸಿದರು. ಅವರು ನನಗೆ ಹಣ ಕೊಟ್ಟಿದ್ದಾರೆ. ಟಿಕೆಟ್ ಕೊಡಿಸ್ತೀನಿ ಅಂತ ನಾನು ಹಣ ಪಡೆದಿಲ್ಲ. ನನಗೆ ಕೊಟ್ಟಿರೋ ಹಣ ವಾಪಸ್ ಕೊಟ್ಟು ಬಿಡ್ತೀನಿ ಎಂದು ವಿಚಾರಣೆ ವೇಳೆ ನಾಟಕ ಶುರುಮಾಡಿದ್ದಾರೆ.

ಈಗಾಗಲೇ 50 ಲಕ್ಷ ಹಣವನ್ನು ಗೋವಿಂದ ಬಾಬು ಅವರಿಗೆ ವಾಪಸ್ ಕೊಟ್ಟಿದ್ದೀನಿ. ದೂರು ಕೊಡುವ ಹಿಂದಿನ ದಿನವೂ ಹಣ ಕೊಡ್ತೀನಿ ಅಂತ ಹೇಳಿದ್ದೆ. ನನ್ನ ಹಣಕ್ಕೆ ಮಾತ್ರ ನಾನು ಜವಾಬ್ದಾರಿ, ಬೇರೆಯವರ ಹಣ ಗೊತ್ತಿಲ್ಲ. ಟಿಕೆಟ್ (BJP Ticekt) ವಿಚಾರವೂ ನನಗೆ ಗೊತ್ತಿಲ್ಲ ಎಂದು ಹೇಳುವ ಮೂಲಕ ನುಣುಚಿಕೊಳ್ಳುವ ಪ್ರಯತ್ನವನ್ನು ಹಾಲಶ್ರೀ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಅಭಿನವ ಹಾಲಶ್ರೀ ನೇತೃತ್ವದಲ್ಲಿ ಗೋವಿಂದ್ ಬಾಬು ಪೂಜಾರಿ ಬಯೋಪಿಕ್

ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಾಲಶ್ರೀ ನಾಪತ್ತೆಯಾಗಿದ್ದರು. ಒಡಿಶಾದಲ್ಲಿ ಮಾರುವೇಷದಲ್ಲಿ ತಲೆಮರೆಸಿಕೊಂಡಿದ್ದ ಹಾಲಶ್ರೀಯನ್ನು ರೈಲ್ವೆ ಪೊಲೀಸರ ನೆರವಿನಿಂದ ಬಂಧಿಸಿ ಬೆಂಗಳೂರಿಗೆ ವಾಪಸ್ ಕರೆತರಲಾಗಿತ್ತು. ಸಿಸಿಬಿ ಪೊಲೀಸರು (CCB Police) ಇಂದು 19ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರು ಪಡಿಸಿದರು.

ಆರೋಪಿಯನ್ನು 14 ದಿನ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸಿಸಿಬಿ, ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಈ ವೇಳೆ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಂ ಕೂಡ ಹಾಜರಿದ್ದರು. ಪೊಲೀಸ್ ಕಸ್ಟಡಿಗೆ ಆಕ್ಷೇಪ ವ್ಯಕ್ತಪಡಿಸಿ, ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆರೋಪಿಗೆ ಜಾಮೀನು ನೀಡದಂತೆ ಪಬ್ಲಿಕ್ ಪ್ರಾಸಿಕ್ಯೂಟರ್ ವಕೀಲರು ಆಕ್ಷೇಪಿಸಿದರು. ತನಿಖೆ ನಡೆಯುವ ಮಧ್ಯೆ ಜಾಮೀನು ನೀಡಬಾರದು. ಸಾಕ್ಷಿ ನಾಶವಾಗುತ್ತದೆ ಎಂದು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್