ಭಾರತ, ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ?

1 Min Read

ಕೊಲಂಬೋ: ಭಾರತ (India) ಮತ್ತು ಪಾಕಿಸ್ತಾನ (Pakistan) ಮಧ್ಯೆ ನಡೆಯುವ ರಣರೋಚಕ ಪಂದ್ಯಕ್ಕೆ ಮಳೆ (Rain) ಅಡ್ಡಿ ಪಡಿಸುವ ಸಾಧ್ಯತೆಯಿದೆ.

ಶ್ರೀಲಂಕಾದ(Sri Lanka) ಕೊಲಂಬೋದಲ್ಲಿ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪಂದ್ಯ ನಿಗದಿಯಾಗಿದೆ. ಆದರೆ ಈ ಪಂದ್ಯಕ್ಕೆ ಮೊದಲು ಮಳೆ (Rain) ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

ಫೆಬ್ರವರಿ 15 ರ ಸುಮಾರಿಗೆ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಕಡಿಮೆ ಒತ್ತಡದ ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಶ್ರೀಲಂಕಾದ ಹವಾಮಾನ ಇಲಾಖೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: T20 World Cup | ಪಾಕ್‌ ಬೇಡಿಕೆ ಸಾರಾ ಸಗಟಾಗಿ ತಿರಸ್ಕರಿಸಿದ ಐಸಿಸಿ

 

ಅಕ್ಯೂವೆದರ್ ಪ್ರಕಾರ, ಪಂದ್ಯ ಪ್ರಾರಂಭವಾಗುವ ಎರಡು ಗಂಟೆಗಳ ಮೊದಲು ಸಂಜೆ 5 ಗಂಟೆಯ ಸುಮಾರಿಗೆ ಮಳೆಯಾಗುವ ಸಾಧ್ಯತೆಯಿದೆ. ಹೀಗಿದ್ದರೂ ಪಂದ್ಯ ನಡೆಯುವ ಮಳೆ ಬರುವ ಸಾಧ್ಯತೆ ಕಡಿಮೆ ಎಂದು ಹೇಳಿದೆ.

ಬಾಂಗ್ಲಾದೇಶದ ಪಂದ್ಯಗಳನ್ನು ಭಾರತದಿಂದ ಸ್ಥಳಾಂತರ ಮಾಡದ್ದಕ್ಕೆ ಪಾಕಿಸ್ತಾನ ಆರಂಭದಲ್ಲಿ ಟೀಂ ಇಂಡಿಯಾ ವಿರುದ್ಧ ಆಡುವುದಿಲ್ಲ ಎಂದು ಹೇಳಿತ್ತು. ನಂತರ ಐಸಿಸಿ ನೀಡಿದ ಎಚ್ಚರಿಕೆಯ ಬಳಿಕ ಪಂದ್ಯ ಆಡಲು ಒಪ್ಪಿಗೆ ನೀಡಿತ್ತು.

Share This Article