World Cup 2023 – 5 ತಂಡಗಳ ಪ್ರಕಟ

Public TV
3 Min Read

ನವದೆಹಲಿ: ಏಕದಿನ ವಿಶ್ವಕಪ್ ಕ್ರಿಕೆಟ್ 2023 ಪಂದ್ಯಗಳಿಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಅಕ್ಟೋಬರ್ 5 ರಿಂದ ಶುರುವಾಗಲಿರುವ ಈ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿವೆ. ಈ ಹತ್ತು ತಂಡಗಳಲ್ಲಿ ಈಗಾಗಲೇ 5 ಟೀಮ್‍ಗಳ ಘೋಷಣೆಯಾಗಿದೆ. ಇನ್ನು ಐದು ತಂಡಗಳನ್ನು ಪ್ರಕಟಿಸಬೇಕಿದೆ.

ಭಾರತದಲ್ಲಿ ನಡೆಯಲಿರುವ ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ನ್ಯೂಜಿಲೆಂಡ್‍ನ್ನು ಎದುರಿಸಲಿದೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಇದನ್ನೂ ಓದಿ: World Cup 2023: ಕ್ರಿಕೆಟ್‌ ಅಭಿಮಾನಿಗಳಿಗೆ ಬಂಪರ್‌ ಆಫರ್‌ – ಇನ್ನೂ 4 ಲಕ್ಷ ಟಿಕೆಟ್‌ ಮಾರಾಟಕ್ಕೆ BCCI ನಿರ್ಧಾರ

ಭಾರತ, ನೆದರ್‌ಲೆಂಡ್ಸ್, ಆಸ್ಟ್ರೇಲಿಯಾ, ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಮ್ಮ ತಂಡಗಳನ್ನು ಪ್ರಕಟಿಸಿವೆ. ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ತಂಡಗಳನ್ನು ಘೋಷಣೆ ಆಗಬೇಕಿದೆ. ಅದರಂತೆ ಏಕದಿನ ವಿಶ್ವಕಪ್‍ಗಾಗಿ ಪ್ರಕಟಿಸಲಾದ 5 ತಂಡಗಳ ಆಟಗಾರರ ಪಟ್ಟಿ ಈ ಕೆಳಗಿದೆ.

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್‍ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್‍ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೈರ್‍ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‍ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್ ಮತ್ತು ಕ್ರಿಸ್ ವೋಕ್ಸ್.

ಸೌತ್ ಆಫ್ರಿಕಾ ತಂಡ: ಟೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೊಯೆಟ್ನಿ, ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಸಿಸಂದಾ ಮಗಾಲಾ, ಕೇಶವ್ ಮಹಾರಾಜ್, ಐಡೆನ್ ಮಾಕ್ರ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆನ್ರಿಕ್ ನೋಕಿಯಾ, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ತಬ್ರೇಝ್ ಶಂಸಿ, ಕಗಿಸೊ ರಬಾಡ.

ನೆದರ್‌ಲೆಂಡ್ಸ್ ತಂಡ: ಸ್ಕಾಟ್ ಎಡ್ವರ್ಡ್ಸ್ (ನಾಯಕ), ಮ್ಯಾಕ್ಸ್ ಒಡೌಡ್, ಬಾಸ್ ಡಿ ಲೀಡೆ, ವಿಕ್ರಮ್ ಸಿಂಗ್, ತೇಜ ನಿಡಮನೂರು, ಪಾಲ್ ವ್ಯಾನ್ ಮೀಕೆರೆನ್, ಕಾಲಿನ್ ಅಕರ್ಮನ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್, ರಿಯಾನ್ ಕ್ಲೈನ್, ವೆಸ್ಲಿ ಬ್ಯಾರೆಸಿ, ಸಕ್ವಿಬ್ ಬ್ಯಾರೆಸಿ ಜುಲ್ಫಿಕರ್, ಶರೀಜ್ ಅಹ್ಮದ್, ಸೈಬ್ರಾಂಡ್ ಎಂಗಲ್‍ಬ್ರೆಕ್ಟ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಶಾನ್ ಅಬಾಟ್, ಆಷ್ಟನ್ ಅಗರ್, ಕ್ಯಾಮೆರೋನ್ ಗ್ರೀನ್, ಜೋಶ್ ಹ್ಯಾಝಲ್‍ವುಡ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಂ ಝಂಪಾ, ಮಿಚೆಲ್ ಸ್ಟಾರ್ಕ್.

ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯವು ಅಕ್ಟೋಬರ್ 14 ರಂದು ನಡೆಯಲಿದೆ. ಈ ಪಂದ್ಯ ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಫೈನಲ್ ಪಂದ್ಯ ಕೂಡ ನವೆಂಬರ್ 19 ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಜರುಗಲಿದೆ. ಇದನ್ನೂ ಓದಿ: Asia Cup 2023 – ಬಾಂಗ್ಲಾ ವಿರುದ್ಧ ಪಾಕಿಸ್ತಾನಕ್ಕೆ 7 ವಿಕೆಟ್‌ಗಳ ಜಯ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್