-RSS ಬಗ್ಗೆ ಮಾತಾಡೋದು ಪ್ರಿಯಾಂಕ್ ಖರ್ಗೆಗೆ ಶೋಭೆ ತರಲ್ಲ
ರಾಯಚೂರು: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಒಪ್ಪಿದರೆ ಶಿವಸೇನೆ ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದು ಶಿವಸೇನೆ ರಾಜ್ಯಾಧ್ಯಕ್ಷ ಆಂದೋಲ ಸಿದ್ಧಲಿಂಗ ಸ್ವಾಮಿಯವರು ತಿಳಿಸಿದ್ದಾರೆ.
ರಾಯಚೂರಿನಲ್ಲಿ (Raichuru) ಮಾತನಾಡಿದ ಅವರು, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ನಮ್ಮ ಉದ್ದೇಶ ಒಂದೇ. ಅವರ ಜೊತೆ ಮಾತುಕತೆ ನಡೆಸುತ್ತೇವೆ. ನಾಳೆ ವಿಜಯಪುರ ಪ್ರವಾಸಕ್ಕೆ ಹೋಗುತ್ತಿದ್ದೇವೆ. ಆಗ ಅವರೊಂದಿಗೆ ಮಾತನಾಡುತ್ತೇವೆ. ಒಂದು ವೇಳೆ ಅವರು ಒಪ್ಪಿಕೊಂಡರೆ, ಒಂದೇ ಪ್ಲಾಟ್‌ಫಾರಂನಲ್ಲಿ ಹೋರಾಟ ಮಾಡೋಣ ಅಂದ್ರೆ ನಾವು ಸಿದ್ಧರಿದ್ದೇವೆ. ಅವರನ್ನ ನಮ್ಮ ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದಿದ್ದಾರೆ.ಇದನ್ನೂ ಓದಿ:ಸರ್ಕಾರಕ್ಕೆ ನೈತಿಕತೆ ಇದ್ದರೆ ಪ್ರಿಯಾಂಕ್ ಮೇಲೆ ಕೇಸ್ ದಾಖಲಿಸಲಿ: ಅಶ್ವಥ್ ನಾರಾಯಣ್
ಬಿಜೆಪಿಯೂ ಹಿಂದುತ್ವಕ್ಕಾಗಿ ಕೆಲಸ ಮಾಡುತ್ತದೆ. ಶಿವಸೇನೆಯೂ ಹಿಂದುತ್ವಕ್ಕಾಗಿ ಕೆಲಸ ಮಾಡುತ್ತದೆ. ಶಿವಸೇನೆ, ಬಿಜೆಪಿ ಬೇರೆ ಅಲ್ಲ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಸರ್ಕಾರವಿದೆ. ರಾಜ್ಯದಲ್ಲಿ ಹಿಂದೂಗಳ ಮತ ಒಡೆಯದಂತೆ ಸಂಘಟನೆ ಮಾಡುತ್ತೇವೆ. ನಮ್ಮ ಶಿವಸೇನೆ ಮತ್ತು ಬಿಜೆಪಿ ಹೈಕಮಾಂಡ್ ಏನು ನಿರ್ಣಯ ಮಾಡುತ್ತದೆಯೋ ಆ ನಿಟ್ಟಿನಲ್ಲಿ ನಾವು ಕರ್ನಾಟಕದಲ್ಲಿ ಮುಂದುವರಿಯುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನೂ ಆರ್‌ಎಸ್‌ಎಸ್ ಬಗ್ಗೆ ಮಾತನಾಡುವ ಪ್ರಿಯಾಂಕ್ ಖರ್ಗೆ, ಬಿಕೆ ಹರಿಪ್ರಸಾದ್, ಸಂತೋಷ್ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಒಳ್ಳೆಯ ಧ್ಯೇಯೋದ್ದೇಶದಿಂದಲೇ ಆರ್‌ಎಸ್‌ಎಸ್ 100 ವರ್ಷದ ಸಂಭ್ರಮಾಚರಣೆ ಮಾಡುತ್ತಿದೆ. ಆರ್‌ಎಸ್‌ಎಸ್ ಬಗ್ಗೆ ಹಗುರವಾಗಿ ಮಾತನಾಡುವುದು ಪ್ರಿಯಾಂಕ್ ಖರ್ಗೆಗೆ ಶೋಭೆ ತರಲ್ಲ. ಮಹಿಷಾಸುರ, ಭಸ್ಮಾಸುರ ಸೇರಿ ಹಲವರ ಹೆಸರು ಕೇಳಿದ್ವಿ. ಸರ್ಕಾರದ ಕೆಲಮಂತ್ರಿಗಳು, ಪ್ರತಿನಿಧಿಗಳು ತಮ್ಮ ಬಾಯಿ ಚಪಲಕ್ಕೆ ಚಪಲಾಸುರರಂತೆ ಹೊರಹೊಮ್ಮುತ್ತಿದ್ದಾರೆ. ಇದನ್ನು ಶಿವಸೇನೆ ಪಕ್ಷ ಉಗ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.
ಆರ್‌ಎಸ್‌ಎಸ್ ನೋಂದಣಿಯಾಗಿಲ್ಲ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಾವುಟ ಹಾರಿಸಿಯೇ ದೇಶ ಭಕ್ತಿ ಪ್ರದರ್ಶನ ಮಾಡೋ ಅವಶ್ಯಕತೆ ಇಲ್ಲ. ಡೋಂಗಿ ರಾಷ್ಟ್ರಭಕ್ತಿ ಆರ್‌ಎಸ್‌ಎಸ್‌ನಲ್ಲಿಲ್ಲ. ಇದನ್ನು ಟೀಕೆ ಮಾಡುವವರ ಹತ್ತಿರ ಡೋಂಗಿ ರಾಷ್ಟ್ರಭಕ್ತಿ ಇದೆ. ಇವರ ಸಚಿವರು, ಇವರ ರಾಜ್ಯಸಭಾ ಸದಸ್ಯರು ವಿಧಾನಸೌಧದಲ್ಲಿ ನಿಂತ್ಕೊಂಡು ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳ್ತಾರೆ. ಶತಾಯ ಗತಾಯ ಪ್ರಯತ್ನ ಮಾಡಿದ್ರೂ ಆರ್‌ಎಸ್‌ಎಸ್‌ನ್ನು ಮುಟ್ಟೋಕೆ ಆಗಲ್ಲ. ಹಿಂದೂತ್ವಕ್ಕಾಗಿ ಹೊರಟಂತವರು ಪಕ್ಷ ಮಾಡಿದ್ರೆ ಸ್ವಾಗತ ಮಾಡ್ತೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನೀವು ಪಿತೂರಿಯಲ್ಲಿ ತೊಡಗಿದ್ದೀರಿ – ರೈಲ್ವೇ ಹಗರಣದಲ್ಲಿ ಲಾಲು, ರಾಬ್ಡಿ, ತೇಜಸ್ವಿ ವಿರುದ್ಧ ದೋಷಾರೋಪ ನಿಗದಿ