ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು: ಮೋದಿ ಮೆಚ್ಚುಗೆ

Public TV
1 Min Read

ಬೆಂಗಳೂರು: ಬೆಂಗಳೂರಿನ ಜನರು ಕೈ ಜೋಡಿಸಿದ್ರೆ ಏನೂ ಬೇಕಾದ್ರೂ ಮಾಡಬಹುದು ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಕೊಮ್ಮಘಟ್ಟದಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಕಾಸಗೊಂಡರೆ ಇಡೀ ಭಾರತವೇ ವಿಕಾಸಗೊಂಡಂತೆ. ಕೊರೊನಾ ಸಮಯದಲ್ಲಿ ಬೆಂಗಳೂರಿನ ಕೈ ಜೋಡಿಸಿ ನಿಯಂತ್ರಣ ಮಾಡಿದ್ದರು. ಬೆಂಗಳೂರು ಶ್ರೇಷ್ಠ ಭಾರತದ ಪ್ರತೀಕ ಎಂದು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಜೊತೆ ಮಾತ್ರ ಹೆಚ್ಚು ಮಾತನಾಡಿದ ಮೋದಿ

ಎರಡು ದಿನ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಸುಮಾರು 15 ನಿಮಿಷಗಳ ಕಾಲ ಮಾತನಾಡಿದರು. ಕನ್ನಡದಲ್ಲೇ ಮಾತು ಪ್ರಾರಂಭಿಸಿದ ಮೋದಿ, ಕನ್ನಡಿಗರಿಗೆ ಇದು ಮಹತ್ವದ ದಿನ. ಇಂದು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ನನಗಿದು ಬಹಳ ಸಂತೋಷವಾಗಿದೆ ಎಂದು ಹೇಳಿದರು

ಟ್ರಾಫಿಕ್ ನಿಯಂತ್ರಣಕ್ಕೆ ಪಣ: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗಿದ್ದು, ಫ್ಲೈಓವರ್, ಮೆಟ್ರೋ ಅಂಡರ್ ಪಾಸ್ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಬೆಂಗಳೂರು ಅಭಿವೃದ್ಧಿ ಲಕ್ಷಾಂತರ ಜನರ ಕಸಾಗಿದ್ದು, ಇದರ ಶಕ್ತಿಯನ್ನು ಮತ್ತಷ್ಟು ವೃದ್ಧಿಸಲಾಗುತ್ತದೆ. ಡಬಲ್ ಇಂಜಿನ್ ಸರ್ಕಾರ ನುಡಿದಂತೆ ನಡೆಯುತ್ತಿದ್ದು ಬೆಂಗಳೂರು ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಇಂದಿನಿಂದ 2 ದಿನ ಪ್ರಧಾನಿ ರಾಜ್ಯ ಪ್ರವಾಸ – 20 ಗಂಟೆಯಲ್ಲಿ 10 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

40 ವರ್ಷಗಳ ಯೋಜನೆಗೆ ಮುಕ್ತಿ: ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಗಳಿಗೆ ಮುಕ್ತಿ ನೀಡುವ ಸಬ್‌ಅರ್ಬನ್ ರೈಲ್ವೆ ಯೋಜನೆ 40 ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿತ್ತು. ಹಿಂದಿನ ಸರ್ಕಾರಗಳು ಕಡತವನ್ನು ಅಲ್ಲಿಂದಿಲ್ಲಿಗೆ ವರ್ಗಾಯಿಸುವುದರಲ್ಲೇ ಕಾಲ ಕಳೆಯುತ್ತಿದ್ದವು. ಇದೀಗ ಆ ಯೋಜನೆಗೆ ಮುಕ್ತಿಕೊಡಲಾಗುತ್ತಿದೆ. ಟ್ರಾಫಿಕ್ ಮುಕ್ತ ಮಾಡಲು ರೈಲ್ವೆ ಯೋಜನೆಗಳನ್ನು ಆಧುನೀಕರಣಗೊಳಿಸಲಾಗುತ್ತಿದೆ. ಯಶವಂತಪುರ ಕಟೋನ್ಮೆಂಟ್ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ದೇಶ ಸುರಕ್ಷಿತವಾಗಿದೆ, ನಾಗರಿಕರ ಸ್ನೇಹಿಯಾಗಿದೆ, ಸ್ವಚ್ಛವಾಗಿಯೂ ಇದೆ. ನಾನು ನನಗೆ ಕೊಟ್ಟ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ. ಬೆಂಗಳೂರು ಅಭಿವೃದ್ಧಿಗಾಗಿಯೂ ನಿರಂತರವಾಗಿ ಶ್ರಮಿಸಿದ್ದೇನೆ.

Live Tv

Share This Article
Leave a Comment

Leave a Reply

Your email address will not be published. Required fields are marked *