ರಾಮನಗರ: ರೈತರ (Farmers) ಸಮಸ್ಯೆ ಬಗೆಹರಿಸಲಿಲ್ಲ ಅಂದರೆ ಮುಖಕ್ಕೆ ಹೊಡೆಯುತ್ತೇನೆ. ನೀವು ಮಾಡುವ ಕೆಲಸಕ್ಕೆ ಜನ ನಮ್ಮ ಮುಖಕ್ಕೆ ಉಗಿಯುತ್ತಿದ್ದಾರೆ ಎಂದು ಜನಸ್ಪಂದನಾ ಸಭೆಯಲ್ಲಿ (Janaspandana Meeting) ಅಧಿಕಾರಿಗಳನ್ನ ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ (HC Balakrishna) ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾಗಡಿ (Magadi) ತಾಲೂಕು ಕಚೇರಿಯಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಮಾಗಡಿ ತಹಶೀಲ್ದಾರ್ ಶರತ್ ಹಾಗೂ ಎಡಿಎಲ್‌ಆರ್ ಆನಂದ್‌ಗೆ ಶಾಸಕ ಹೆಚ್.ಸಿ.ಬಾಲಕೃಷ್ಣ ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಸಭೆಯಲ್ಲಿ ಪೋಡಿ ದುರಸ್ತಿ ಬಗ್ಗೆ ಅಧಿಕಾರಿಗಳ ವಿರುದ್ಧ ರೈತ ದೂರು ನೀಡಿದ ಹಿನ್ನೆಲೆ ಆಕ್ರೋಶಗೊಂಡ ಶಾಸಕ, ಅಧಿಕಾರಿಗಳು ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದೀರಿ. ಇಬ್ಬರಿಗೂ ಮುಖಕ್ಕೆ ಹೊಡೆಯುತ್ತೇನೆ. ನೀವು ಬಂದಾಗಿನಿಂದ ರೈತರ ಒಂದು ಸಮಸ್ಯೆ ಬಗೆಹರಿಸಲಾಗಿಲ್ಲ. ನಿಮ್ಮಿಬ್ಬರ ಕೆಲಸಕ್ಕೆ ಜನ ನಮ್ಮ ಮುಖಕ್ಕೆ ಉಗಿಯುತ್ತಿದ್ದಾರೆ ಎಂದು ಕ್ಲಾಸ್ ತೆಗೆದುಕೊಂಡರು. ಇದನ್ನೂ ಓದಿ: ಕೊಡಗು | ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿ
ರೈತರ ವಿಚಾರದಲ್ಲಿ ತಮಾಷೆ ಮಾಡುತ್ತಿದ್ದೀರಾ? ರಸ್ತೆಯಲ್ಲಿ ನಿಲ್ಲಿಸಿ ಇಬ್ಬರಿಗೂ ಹಾರ ಹಾಕಿ ಸನ್ಮಾನ ಮಾಡಿಸುತ್ತೇನೆ. ನಾಚಿಕೆ ಆಗಲ್ವಾ ನಿಮಗೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: RSS ಇಂದಿರಾ ಗಾಂಧಿಗೆ ಹೆದರಿಲ್ಲ, ನೆಹರೂ ಮುಂದೆ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?- ಸುನಿಲ್ ಕುಮಾರ್