ಕಡಿಮೆ ಮಕ್ಕಳಿದ್ದರೆ ಪ್ರಗತಿ, ಹೆಚ್ಚು ಮಕ್ಕಳಿದ್ರೆ ಖರ್ಚು ಜಾಸ್ತಿ – ಕೆ.ಸುಧಾಕರ್

Public TV
3 Min Read

ಬೆಂಗಳೂರು: ಕುಟುಂಬದಲ್ಲಿ ಹೆಚ್ಚು ಮಕ್ಕಳಿದ್ದರೆ ಖರ್ಚು ಹೆಚ್ಚಾಗುತ್ತದೆ. ಕಡಿಮೆ ಮಕ್ಕಳಿದ್ದರೆ ದೇಶ ಪ್ರಗತಿಯಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಡೆದ `ವಿಶ್ವ ಜನಸಂಖ್ಯಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 4 ಮಕ್ಕಳ ಬದಲು ಇಬ್ಬರಿದ್ದರೆ ಅವರಿಗೆ ಉತ್ತಮ ಶಿಕ್ಷಣ, ಆರೋಗ್ಯ ಸೌಲಭ್ಯ ನೀಡಬಹುದು. ನೈಸರ್ಗಿಕ ಸಂಪನ್ಮೂಲ ಹಿಂದೆ ಇದ್ದಷ್ಟೇ ಇರುತ್ತದೆ. ಹಾಗೆಯೇ ಭೌಗೋಳಿಕ ವಿಸ್ತೀರ್ಣ ಕೂಡ ಅಷ್ಟೇ ಇರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧ್ವಜ ಸಂಹಿತೆ ತಿದ್ದುಪಡಿ ಮೂಲಕ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ: ಬಿ.ಕೆ ಹರಿಪ್ರಸಾದ್

ಹಿಂದಿಗಿಂತ ದೇಶದ ಜನಸಂಖ್ಯೆ 6-7 ಪಟ್ಟು ಹೆಚ್ಚಿದ್ದರೂ, ಭೂಮಿ, ನೀರು ಮೊದಲಾದ ಸಂಪನ್ಮೂಲಗಳೇನೂ ಹೆಚ್ಚಾಗುವುದಿಲ್ಲ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭೂ ಕುಸಿತ, ಭಾರಿ ಮಳೆ ಸೇರಿದಂತೆ ವಿವಿಧ ಬಗೆಯ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಇದಕ್ಕೆ ಜನಸಂಖ್ಯೆ ಏರಿಕೆ ಕೂಡ ಕಾರಣ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಗೋವಾದಲ್ಲೂ ಆಪರೇಷನ್ ಕಮಲ ಸದ್ದು – ಇಬ್ಬರು ಕಾಂಗ್ರೆಸ್ ಶಾಸಕರ ಅನರ್ಹತೆ ಕೋರಿ ಸ್ಪೀಕರ್‌ಗೆ ಮನವಿ

ಹಿಂದೆ ಆರೋಗ್ಯ ಸೌಲಭ್ಯಗಳು ಕಡಿಮೆ ಇದ್ದಿದ್ದರಿಂದ ಆತಂಕ ಇತ್ತು. ಆದರೆ ಇಂದು ಆರೋಗ್ಯ ಸೌಲಭ್ಯಗಳು ಉತ್ತಮವಾಗಿದೆ. ಜೀವನ ಗುಣಮಟ್ಟ ಹೆಚ್ಚಿದೆ. ಆದ್ದರಿಂದ ಸಣ್ಣ ಸಂಸಾರವಿದ್ದರೆ ಆರ್ಥಿಕತೆ ಉತ್ತಮವಾಗಿರುತ್ತದೆ. ಈ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕೆಲಸವಾಗಬೇಕು. ಕುಟುಂಬ ಯೋಜನೆಯ ಜಾರಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಕುರಿತು ಇನ್ನಷ್ಟು ಜಾಗೃತಿ ಕಾರ್ಯ ನಡೆಯಬೇಕು ಎಂದು ಸಲಹೆ ನೀಡಿದ್ದಾರೆ.

ಕುಟುಂಬ ಯೋಜನೆ ಜನಾಂದೋಲನವಾಗಲಿ: ಭಾರತದ ಜನಸಂಖ್ಯೆ 140 ಕೋಟಿಗೆ ಸಮೀಪಲ್ಲಿದ್ದರೂ, ಯುವಜನರ ಸಂಖ್ಯೆ ಹೆಚ್ಚಿರುವುದು ದೇಶಕ್ಕೆ ಲಾಭದಾಯಕ. ಆದರೂ ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನದಂತೆ ನಡೆಯಬೇಕಿದೆ. ಇದನ್ನೂ ಓದಿ: ಕಾಪು ಕಡಲ್ಕೊರೆತಕ್ಕೆ ತುತ್ತಾದ ಪ್ರದೇಶಕ್ಕೆ ಶೋಭಾ ಕರಂದ್ಲಾಜೆ ಭೇಟಿ- ಪರಿಹಾರದ ಭರವಸೆ

ವೈದ್ಯಕೀಯ ಆವಿಷ್ಕಾರ ಹಾಗೂ ಉತ್ಕೃಷ್ಟ ಆರೋಗ್ಯ ಸೇವೆಗಳಿಂದಾಗಿ ಜನರ ಗರಿಷ್ಠ ವಯೋಮಿತಿ 65-70ಕ್ಕೆ ತಲುಪಿದೆ. ಮುಂದುವರಿದ ದೇಶಗಳಲ್ಲಿ 80 ವರ್ಷ ವಯಸ್ಸಿನವರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಜಪಾನ್, ಇಟಲಿ, ಸ್ಪೇನ್ ಮೊದಲಾದ ದೇಶಗಳಲ್ಲಿ ಹಿರಿಯ ನಾಗರಿಕರು ಹೆಚ್ಚಿದ್ದು, ಯುವಜನರ ಸಂಖ್ಯೆ ಕಡಿಮೆಯಾಗಿದೆ. ಆದರೆ ಭಾರತದಲ್ಲಿ ಶೇ.60 ರಷ್ಟು ಮಂದಿ 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಇಂತಹ ಯುವಜನರು ದೇಶದ ಶಕ್ತಿಯಾಗಿದ್ದಾರೆ. ಜನಸಂಖ್ಯೆ ಹೆಚ್ಚಿದ್ದರೂ, ಯುವಜನರು ಹೆಚ್ಚಿರುವುದರಿಂದ ದೇಶಕ್ಕೆ ಲಾಭವಾಗಿದೆ. ಜಗತ್ತಿನಲ್ಲಿ ಭಾರತ 3ನೇ ಅತಿ ದೊಡ್ಡ ಆರ್ಥಿಕ ವ್ಯವಸ್ಥೆಯಾಗಿದೆ. ಅತಿ ಹೆಚ್ಚು ಗ್ರಾಹಕರನ್ನು ದೇಶ ಹೊಂದಿರುವುದರಿಂದ ಬಹುರಾಷ್ಟ್ರೀಯ ಕಂಪನಿಗಳು ಇತ್ತ ಕಡೆ ನೋಡುತ್ತಿವೆ ಎಂದು ಶ್ಲಾಘಿಸಿದ್ದಾರೆ.

ಭಾರತದಲ್ಲಿ ಜನಸಂಖ್ಯೆ ವೇಗವಾಗಿ ಏರಿಕೆಯಾಗುತ್ತಿದೆ. ಜಗತ್ತಿನ ಜನಸಂಖ್ಯೆ 500 ಕೋಟಿಯಿಂದ 800 ಕೋಟಿಗೆ ತಲುಪಿದೆ. ಭಾರತದ ಜನಸಂಖ್ಯೆ 1.4 ಬಿಲಿಯನ್‌ಗೆ ತಲುಪಿದೆ. ಇದರಿಂದಾಗಿ ಸಮಾಜಕ್ಕೆ, ಪರಿಸರಕ್ಕಾಗುವ ದುಷ್ಪರಿಣಾಮವೇನು? ಎಂಬುದನ್ನೂ ಆಲೋಚಿಸಬೇಕು. ಸೂಕ್ಷಮವಾಗಿ ಅವಲೋಕಿಸಿ ನಿರ್ಧಾರಗಳನ್ನು ಕೈಗೊಳ್ಳಬೇಕು. ಹಿಂದೆ ಭಾರತದ ಕುಟುಂಬಗಳಲ್ಲಿ ಮೂರು ನಾಲ್ಕು ಮಕ್ಕಳಿರುತ್ತಿದ್ದರು. ಕಾಲಕ್ರಮೇಣ ಅವಿಭಕ್ತ ಕುಟುಂಬ ಪದ್ಧತಿ ಮರೆಯಾಗುತ್ತಿದೆ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು `ನಮ್ಮ ಕ್ಲಿನಿಕ್’ ಯೋಜನೆ ಜಾರಿಗೆ ತಂದಿದ್ದಾರೆ. ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಕ್ಲಿನಿಕ್‌ಗಳನ್ನು ತೆರೆಯಬೇಕು ಎಂದು ಹೇಳಿದೆ. ಇಂತಹ ಕ್ಲಿನಿಕ್‌ಗಳಲ್ಲಿ ಕುಟುಂಬ ಯೋಜನೆ ಕುರಿತು ಜನರಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *