ವಿವಿ ಸಾಗರಕ್ಕೆ ನೀರು ಹರಿಸಲು ಆಗದಿದ್ದರೆ ರಾಜೀನಾಮೆ: ವೆಂಕಟರಮಣಪ್ಪ

Public TV
1 Min Read

ಚಿತ್ರದುರ್ಗ: ಆಗಸ್ಟ್ 10 ರೊಳಗಾಗಿ ವಾಣಿ ವಿಲಾಸ(ವಿವಿ) ಸಾಗರಕ್ಕೆ ನೀರು ಹರಿಸದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಸಚಿವ ವೆಂಕಟರಮಣಪ್ಪ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ.

ಜಿಲ್ಲೆ ಹಿರಿಯೂರು ನಗರದಲ್ಲಿ ನಡೆದ ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಮುಗಿಸುವಂತೆ ಆಗ್ರಹಿಸಿ ಕೈಗೊಂಡಿದ್ದ ಸತ್ಯಾಗ್ರಹದಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ಹಿರಿಯೂರಿನ ವಿವಿಧ ಸಂಘಟನೆಗಳು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರ ಮನವೊಲಿಸಿದ ಸಚಿವರು, ನೀರು ಹರಿಸದಿದ್ದರೆ ರಾಜಿನಾಮೆ ನೀಡುತ್ತೇನೆ ಎಂದು ಮಾತು ಕೊಟ್ಟಿದ್ದಾರೆ.

ಜುಲೈ 30ರ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ಆನಂತರ ವಾಣಿ ವಿಲಾಸ ಸಾಗರಕ್ಕೆ ನೀರು ಬರುತ್ತದೆ. ಒಂದು ವೇಳೆ ಆಗಸ್ಟ್ 10ರ ಒಳಗಾಗಿ ನೀರು ಬರದಿದ್ದರೆ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಮಾತು ತಪ್ಪುವುದಿಲ್ಲ. ಈ ವಿಷಯದಲ್ಲಿ ಸುಳ್ಳು ಹೇಳುವುದಿಲ್ಲ. ನಾನು ಕೂಡಾ ರೈತನ ಮಗ ಎಂದು ವೆಂಕಟರಮಣಪ್ಪ ರೈತರಿಗೆ ಭರವಸೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *