ನಾನು ತಪ್ಪು ಮಾಡಿದ್ದರೆ ಕಾನೂನಿಗೆ ತಲೆ ಬಾಗುವೆ : ಫಿಲ್ಮ್ ಚೇಂಬರ್ ಗೆ ಕಿಚ್ಚನ ಪತ್ರ

Public TV
2 Min Read

ಕಿಚ್ಚ ಸುದೀಪ್ ಮೇಲೆ ನಿರ್ಮಾಪಕ ಎನ್.ಎಮ್. ಕುಮಾರ್  (NM Kumar) ಗುರುತರ ಆರೋಪ ಮಾಡಿದ್ದರು. ತಮ್ಮಿಂದ ಸಿನಿಮಾ ಮಾಡಲು ಮುಂಗಡ ಹಣ ತೆಗೆದುಕೊಂಡು ಕಾಲ್ ಶೀಟ್ ನೀಡುತ್ತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ನೋವು ಹೊರಹಾಕಿದ್ದರು. ಹಲವು ವರ್ಷಗಳಿಂದ ತಾವು ಸುದೀಪ್ ಅವರ ಕಾಲ್ ಶೀಟ್ ಗಾಗಿ ಕಾಯುತ್ತಿದ್ದರೂ, ಅವರು ಪರಭಾಷಾ ನಿರ್ಮಾಪಕರಿಗೆ ಕಾಲ್ ಶೀಟ್ ನೀಡಿ ತಮಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಆರೋಪಕ್ಕೆ ಸುದೀಪ್ (Sudeep) ಕಾನೂನು ಮೂಲಕವೇ ಉತ್ತರಿಸಿದ್ದರು. ತಮ್ಮ ಮೇಲೆ ಸುಖಾಸುಮ್ಮನೆ ಆರೋಪ ಮಾಡಿ, ತಮ್ಮ ವ್ಯಕ್ತಿತ್ವಕ್ಕೆ ಕುಮಾರ್ ಧಕ್ಕೆ ತರುತ್ತಿದ್ದಾರೆ ಎಂದು ಮಾನನಷ್ಟ ನೋಟಿಸ್ ಕಳುಹಿಸಿದ್ದರು. ಬರೋಬ್ಬರಿ 10 ಕೋಟಿ ರೂಪಾಯಿ ಮಾನನಷ್ಟ ಕಟ್ಟಿಕೊಡಬೇಕು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದರು. ನೋಟಿಸ್ ಕಳುಹಿಸುತ್ತಿದ್ದಂತೆಯೇ ಕುಮಾರ್ ಮತ್ತೆ ಪತ್ರಿಕಾಗೋಷ್ಠಿ ನಡೆಸಿ ಸುದೀಪ್ ತಮಗೆ ಮೋಸ ಮಾಡಿದ್ದು ನಿಜ ಎಂದು ಮತ್ತೆ ನುಡಿದಿದ್ದರು. ಇದನ್ನೂ ಓದಿ:ವಿಶೇಷ ಆಮ್ಲಜನಕ ಚಿಕಿತ್ಸೆಯ ಮೊರೆ ಹೋದ ಸಮಂತಾ

ಈ ಎಲ್ಲ ಆರೋಪ ಪ್ರತ್ಯಾರೋಪಕ್ಕೆ ಉತ್ತರ ಎನ್ನುವಂತೆ ಸುದೀಪ್, ಚಲನಚಿತ್ರ ವಾಣಿಜ್ಯ ಮಂಡಳಿ (Film Chamber), ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಕ್ಕೆ ಪತ್ರ (Letter) ಬರೆದಿದ್ದಾರೆ. ಮೂರು ಸಂಸ್ಥೆಗಳು ನಿರ್ಮಾಪಕರ ಪರ ನಿಲ್ಲಬೇಕೋ ಅಥವಾ ಕಲಾವಿದರ ಪರ ನಿಲ್ಲಬೇಕೋ ಎನ್ನುವ ಸಂದಿಗ್ಧತೆಗೆ ಒಳಗಾಗದೇ ನನ್ನ ಮೇಲೆ ಬಲವಂತದ ಒತ್ತಡ ಹಾಕದೆ, ನ್ಯಾಯಾಲಯದಲ್ಲೇ ಇದನ್ನು ಬಗೆಹರಿಸಿಕೊಳ್ಳಲು ಬಿಡಿ. ನಾನೇನಾದರೂ ತಪ್ಪು ಮಾಡಿದ್ದರೆ, ನ್ಯಾಯಾಯಲದಲ್ಲೇ ಶಿರಬಾಗಿ ಒಪ್ಪಿಕೊಂಡು ದಂಡ ಕಟ್ಟುತ್ತೇನೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ವಾಣಿಜ್ಯ ಮಂಡಳಿಗೆ ನಿರ್ಮಾಪಕರೊಬ್ಬರು ಮೊರೆ ಬಂದಿರುವುದು ಸರಿಯಷ್ಟೇ. ಸ್ಪಂದಿಸಬೇಕಾದದ್ದು ನಿಮ್ಮ ಕರ್ತವ್ಯ. ನೀವು ಸ್ಪಂದಿಸಿದ್ದೀರಿ. ಆ ಬಗ್ಗೆ ನನಗೆ ಯಾವುದೇ ತಕರಾರು ಇರುವುದಿಲ್ಲ. ಯಾವುದೇ ನಿರ್ಮಾಪಕರು, ಯಾರೇ ಕಲಾವಿದರು, ತಂತ್ರಜ್ಞರ ಮೇಲೆ ನಿರಾಧಾರ ಸುಳ್ಳು ಆರೋಪಗಳನ್ನು ಮಾಡುವಾಗ, ಕನಿಷ್ಠ ದಾಖಲಾತಿಗಳನ್ನು ಪರಿವೀಕ್ಷಿಸುವುದು ಮಾತೃ ಸಂಸ್ಥೆಗಳಾದ ನಿಮ್ಮದೂ ಜವಾಬ್ದಾರಿ ಆಗಿರುತ್ತದೆಂದು ವಿನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ಮಾತೃ ಸಂಸ್ಥೆಗಳಿಗೂ ಕಿಚ್ಚ ಪಾಠ ಮಾಡಿದ್ದಾರೆ.

27 ವರ್ಷಗಳ ಕಾಲ ನಾನೂ ಎಂದಾದರೂ ಒಂದೇ ಒಂದು ಕಪ್ಪು ಚುಕ್ಕೆ ಬೀಳುವಂತೆ ನಡೆದುಕೊಂಡಿಲ್ಲ. 80 ವರ್ಷಗಳ ಕಾಲ ಚಿತ್ರರಂಗದ ರಥ ಎಳೆದು ಬಂದಿರುವುದು, ಈ ನಂಬಿಕೆ ಎಂಬ ಹಗ್ಗದ ಮೇಲೇಯೆ. ಆ ನಂಬಿಕೆಯ ಹಗ್ಗದ ಮೇಲೆಯೇ ನಾನು ವಿಶೇಷ ಪಾತ್ರಗಳನ್ನು ಹೊರತು ಪಡಿಸಿ, 45 ಸಿನಿಮಾಗಳಲ್ಲಿ ದಾಖಲೆಯಾಗಿ ಉಳಿದಿದ್ದೇನೆ. ನನಗೂ ಬಹುಪಾಲು ನಿರ್ಮಾಪಕರಿಂದ ಹಣ ಬರಬೇಕಿದೆ. ಎಂದಾದರೂ ಮಂಡಳಿಯ ಕದ ತಟ್ಟಿದ್ದೇನೆಯೇ? ಈವರೆಗೂ ಈ ನಿಮ್ಮ ಪ್ರೀತಿಯ ಸುದೀಪ ಒಳ್ಳೆತನಕ್ಕೆ ಉದಾಹರಣೆ ಆಗಿದ್ದಾನೆ ಹೊರತು ಕೆಟ್ಟತನಕ್ಕಲ್ಲ ಎಂದು ಹೇಳುವ ಮೂಲಕ ತಮಗೂ ನಿರ್ಮಾಪಕರಿಂದ ಬಾಕಿ ಬರಬೇಕಾಗಿದ್ದನ್ನೂ ನೆನಪಿಸಿದ್ದಾರೆ.

ಚಿತ್ರರಂಗದ ಮುಂದಿನ ಭವಿತವ್ಯಕ್ಕೆ ಕೆಟ್ಟ ಉದಾಹರಣೆ ದಕ್ಕಬಾರದು ಎಂದು ಇಷ್ಟು ಕಠಿಣವಾದ ಹೋರಾಟ ಮಾಡುತ್ತಿರುವುದಾಗಿ ಕಿಚ್ಚ ಪತ್ರದಲ್ಲಿ ಬರೆದಿದ್ದಾರೆ. ಯಾರದ್ದೋ ಆಗಲಿ ಜೀವನ-ಜೀವ ಉಳಿಸಲು ಪ್ರಯತ್ನಿಸಿದ್ದೇನೇ ಹೊರತು, ಯಾರ ಜೀವ ಹೋಗಲೂ ನಾನು ಬದುಕಿನುದ್ದಕ್ಕೂ ಸಾಕ್ಷಿಯಾಗಲಾರೆ ಎಂದು ಹೇಳುವ ಮೂಲಕ ಎನ್.ಎಂ. ಸುರೇಶ್ ಅವರಿಗೂ ಇದೇ ಪತ್ರದಲ್ಲಿ ಉತ್ತರ ನೀಡಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್