ಪ್ರಧಾನಿ ಮೋದಿ ಕೋಪಗೊಂಡಿದ್ದರೆ, ಬಿರೇನ್ ಸಿಂಗ್ ವಜಾ ಮಾಡಬಹುದಿತ್ತು: ಖರ್ಗೆ ಟಾಂಗ್

By
1 Min Read

ನವದೆಹಲಿ: ಮಣಿಪುರದಲ್ಲಿ (Manipur) ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನಿಜವಾಗಿಯೂ ಕೋಪಗೊಂಡಿದ್ದರೆ, ಅವರು ಮೊದಲು ಮುಖ್ಯಮಂತ್ರಿ ಬಿರೇನ್ ಸಿಂಗ್ (N Biren Singh) ಅವರನ್ನು ವಜಾ ಮಾಡಬಹುದಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ.

ತಮ್ಮ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ ಖರ್ಗೆ, ಪ್ರತ್ಯೇಕ ಟ್ವೀಟ್‌ನಲ್ಲಿ ವಾಗ್ದಾಳಿ ನಡೆಸಿದರು. ಶುಕ್ರವಾರದ ಸಂಸತ್ತಿನಲ್ಲಿ ಮಣಿಪುರ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡಬಹುದು ಎಂದು ಭಾರತ ನಿರೀಕ್ಷಿಸುತ್ತಿದೆ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ವ್ಯಕ್ತಿಯ ತಲೆ ಕತ್ತರಿಸಿ ಬಿದಿರಿನ ಬೇಲಿಗೆ ನೇತುಹಾಕಿದ್ದ ದುಷ್ಕರ್ಮಿಗಳು – ಮಣಿಪುರದ ಮತ್ತೊಂದು ವೀಡಿಯೋ ವೈರಲ್‌

ನಿಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೇತೃತ್ವದಲ್ಲಿ 80 ದಿನಗಳ ಕಾಲ ನಡೆದ ಹಿಂಸಾಚಾರದ ಬಗ್ಗೆ ಸಂಪೂರ್ಣ ಅಸಹಾಯಕ ಮತ್ತು ಪಶ್ಚಾತ್ತಾಪವಿಲ್ಲದೆ ವಿಸ್ತೃತವಾದ ಹೇಳಿಕೆಯನ್ನು ನೀಡಬೇಕೆಂದು ವಿಪಕ್ಷಗಳ ಒಕ್ಕೂಟ ಇಂಡಿಯಾ ಬಯಸುತ್ತಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಸರ್ಕಾರದ ಕಾನೂನು ಬಾಹಿರ ಚಟುವಟಿಕೆ ವಿರುದ್ಧ ನಾನು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ: ಹೆಚ್‌ಡಿಕೆ ಶಪಥ

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್