ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಿ – ಅಧಿಕಾರಿಗಳಿಗೆ ಕಾರಜೋಳ ವಾರ್ನಿಂಗ್

Public TV
1 Min Read

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚೆತ್ತುಕೊಂಡಿದ್ದು ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದಾರೆ.

ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಯಾರಾದರೂ ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಬೇಕು. ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡಲು ಬಿಡಬಾರದು. ಸರ್ಕಾರದ ಯೋಜನೆ ಮಂಜೂರಾಗದೇ ಯಾರಾದರೂ ಕಾಮಗಾರಿ ಮಾಡುವುದು ಗಮನಕ್ಕೆ ಬಂದರೆ ಪಿಡಿಒಗಳು, ಇಒಗಳು, ಇಂಜಿನಿಯರ್‌ಗಳೇ ಹೊಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕರೇ ಅಮಿತ್‌ ಶಾ ಗುಲಾಮರಾಗಬೇಡಿ, ಕನ್ನಡ ತಾಯಿ ಸ್ವಾಭಿಮಾನಿ ಮಕ್ಕಳಾಗಿ: ಸಿದ್ದು

ನಿಮ್ಮ ಮನೆಯಲ್ಲಿ ಯಾರಾದರೂ ಹೇಳದೇ ಕೆಲಸ ಮಾಡುವುದಕ್ಕೆ ಬಂದರೆ ಸುಮ್ಮನೇ ಇರುತ್ತೀರಾ? ಹೀಗಾಗಿ ಬಹಳ ಬಿಗಿಯಾಗಿ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅನಧಿಕೃತ ವ್ಯಕ್ತಿಗಳು ನಮ್ಮ ಪ್ರಿಮೈಸಿಸ್‍ನಲ್ಲಿ ಬರಬಾರದು. ಗ್ರಾಮ ಪಂಚಾಯತ್‍ನಲ್ಲಿ ಯಾರಾದರೂ ಬಂದು ಕೆಲಸ ಮಾಡುತ್ತಾರೆ ಅಂದರೆ ಬಿಡಬಾರದು. ಒಂದು ವೇಳೆ ಬಿಟ್ಟಿದ್ದೆ ಆದರೆ, ಸುಮ್ಮನೇ ಅಧಿಕಾರಿಗಳಿಗೂ ಕೆಟ್ಟ ಹೆಸರು, ಸರ್ಕಾರಕ್ಕೂ ಕೆಟ್ಟ ಹೆಸರು ವಿನಾ ಕಾರಣ ಅಪಪ್ರಚಾರ ಆಗುತ್ತದೆ. ಒಂದು ವೇಳೆ ಯಾರಾದರೂ ಪುಂಡಾಟಿಕೆ ಮಾಡಿದರೆ ಪೊಲೀಸರಿಗೆ ದೂರು ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನೂತನ ಮನೆಗೆ ಮೋದಿ ಹೆಸರಿಟ್ಟ ಚನ್ನಗಿರಿಯ ಅಭಿಮಾನಿ

 

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಅಂತ ಅಲ್ಲ. ಈಗಾಗಲೇ ತನಿಖೆ ಆಗುತ್ತಿದೆ ತನಿಖೆ ವರದಿ ಬರಬೇಕು. ತನಿಖೆ ಆಗದೇ ನಾನು ಮಂತ್ರಿಯಾಗಿ ಹೇಳಿದರೆ ಸರ್ಕಾರವೇ ಹೇಳಿದ ಹಾಗೇ ಆಗುತ್ತದೆ. ತನಿಖೆಗೆ ಅಡ್ಡಿಪಡಿಸುವಂತೆ ಆಗಬಾರದು. ಹೀಗಾಗಿ ನಾನು ಮಾತನಾಡುವುದಿಲ್ಲ. ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುವಂತಿಲ್ಲ. ನಮ್ಮ ಕಾನೂನಿನಲ್ಲಿ ಇದಕ್ಕೆ ಅವಕಾಶ ಇಲ್ಲ. ಯಾವುದೇ ಕಾಮಗಾರಿ ಮಾಡಬೇಕಾದರೆ ವರ್ಕ್ ಎಸ್ಟಿಮೇಟ್ ಮಾಡಬೇಕಾಗುತ್ತದೆ. ಮಂಜೂರಾತಿ, ಗ್ರ್ಯಾಂಟ್ ಪಡೆಯಬೇಕು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *