ಟಿಕೆಟ್‌ ದರ ಏರಿಸದೇ ಇದ್ದರೆ ಸಂಸ್ಥೆ ಉಳಿಯಲ್ಲ: ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಶ್ರೀನಿವಾಸ್‌

Public TV
1 Min Read

– ಕಳೆದ ತ್ರೈಮಾಸಿಕದಲ್ಲಿ 295 ಕೋಟಿ  ರೂ. ನಷ್ಟ

ತುಮಕೂರು: ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್‌ ದರ (Ticket Price) ಏರಿಸದೇ ಇದ್ದರೆ ಕೆಎಸ್‌ಆರ್‌ಟಿಸಿ (KSRTC) ಸಂಸ್ಥೆ ಉಳಿಯುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದ್ಯದಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು 15-20% ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಶಕ್ತಿ ಯೋಜನೆಯಿಂದ ನಷ್ಟದಲ್ಲಿದ್ದೇವೆ, ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆ: ರಾಜು ಕಾಗೆ

 

ತೈಲ ಬೆಲೆ ಏರಿಕೆ, ಹೊಸ ಬಸ್‌ಗಳ ಖರೀದಿಯಿಂದ ಸಂಸ್ಥೆಗೆ ಹೊರೆಯಾಗಿದೆ. ಅಲ್ಲದೇ ಈ ಬಾರಿ ಸಾರಿಗೆ ಸಂಸ್ಥೆಯ ನೌಕರರ ವೇತನ ಪರಿಷ್ಕರಣೆ ಮಾಡಲಿದ್ದೇವೆ. ಬಿಡಿ ಭಾಗಗಳ ದರ ಏರಿಕೆಯಾಗಿದೆ. ಈ ಎಲ್ಲಾ ಕಾರಣಗಳಿಂದ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಶಾಸಕರು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಆಯ್ತು ಈಗ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಅಕ್ರಮ ವರ್ಗಾವಣೆ

ಕಳೆದ ತ್ರೈಮಾಸಿಕದಲ್ಲಿ ನಿಗಮಕ್ಕೆ 295 ಕೋಟಿ ರೂ. ನಷ್ಟವಾಗಿದೆ. ಪ್ರತಿ ಬಾರಿಯೂ ನಷ್ಟವನ್ನು ಸರಿದೂಗಿಸಿಕೊಡುವಂತೆ ಸರ್ಕಾರವನ್ನು ಕೇಳುವುದು ಸರಿಯಲ್ಲ. ನಷ್ಟವನ್ನು ಸರಿದೂಗಿಸಲು ಹಾಗೂ ಸಂಸ್ಥೆಯನ್ನು ಉಳಿಸಬೇಕಾದರೆ ಟಿಕೆಟ್ ದರ ಹೆಚ್ಚಿಗೆ ಮಾಡಲೇಬೇಕು ಎಂದು ಸಮಜಾಯಿಷಿ ಕೊಟ್ಟಿದ್ದಾರೆ.

 

ಟಿಕೆಟ್ ದರ ಹೆಚ್ಚಳ ಮಾಡುವುದರಿಂದ ಪುರುಷ ಪ್ರಯಾಣಿಕರಿಗೆ ಹೊರೆಯಾಗುತ್ತದೆ ಎನ್ನುವ ಪ್ರಶ್ನೆಯೇ ಇಲ್ಲ. ಶಕ್ತಿ ಯೋಜನೆಯಲ್ಲಿನ ಮಹಿಳಾ ಪ್ರಯಾಣಿಕರ ಟಿಕೆಟ್ ದರ ಕೂಡ ಹೆಚ್ಚಾಗಲಿದ್ದು ಅದನ್ನು ಸರ್ಕಾರ ಭರಿಸುತ್ತದೆ ಎಂದು ತಿಳಿಸಿದರು.

Share This Article