ತಾಕತ್ತಿದ್ರೆ ಅರುಣ್ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ – ಸರ್ಕಾರ, ಪೊಲೀಸರಿಗೆ ಯುವಕನ ಸವಾಲು

Public TV
2 Min Read

ಮಂಗಳೂರು: ತಾಕತ್ತಿದ್ರೆ ಅರುಣ್ ಕುಮಾರ್ ಪುತ್ತಿಲರನ್ನು (Arun Kumar Puthila) ಗಡಿಪಾರು ಮಾಡಿ ನೋಡಿ, ಒಮ್ಮೆ ಪುತ್ತಿಲರ ವಿಷಯಕ್ಕೆ ಬನ್ನಿ ನೋಡೋಣ ಎಂದು ಯುವಕನೋರ್ವ ಸರ್ಕಾರ ಹಾಗೂ ಪೊಲೀಸರಿಗೆ ಸವಾಲು ಹಾಕಿದ್ದಾನೆ.

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಗಡಿಪಾರು ಕಾನೂನು ಪ್ರಕ್ರಿಯೆ ವಿಚಾರವಾಗಿ ಸೆಲ್ಫಿ ವೀಡಿಯೋ ಮಾಡಿ ಯುವಕ ಆಕ್ರೋಶ ಹೊರಹಾಕಿದ್ದಾನೆ. ಯಾವ ಕಾರಣಕ್ಕೆ ಗಡಿಪಾರು (Deportation) ಮಾಡುತ್ತಿದ್ದೀರಿ ಹೇಳಿ. ಹಿಂದೂ ಸಮಾಜ ಯಾವ ಅನ್ಯಾಯ ಮಾಡಿದೆ ಹೇಳಿ, ಆಮೇಲೆ ನೋಟಿಸ್ ಕೊಡಿ. ನಾವು ಬಿಡುವ ಪ್ರಶ್ನೆಯೇ ಇಲ್ಲ ಎಂದು ಕಿಡಿಕಾರಿದ್ದಾನೆ. ಇದನ್ನೂ ಓದಿ: RCB ಇಂಪ್ಯಾಕ್ಟ್ ಪ್ಲೇಯರ್ ಆಗಿ ಸಿಂಧನೂರಿನ ಮನೋಜ್ ಬಾಂಡಗೆ – ಕುಟುಂಬಸ್ಥರಿಂದ ಗೆಲುವಿನ ಶುಭಹಾರೈಕೆ

ಇನ್ನು ಮುಂದೆ ಕೂಡ 24 ಗಂಟೆಗಳ ಕಾಲ ಹಿಂದುತ್ವಕ್ಕೆ ದುಡಿಯುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳು ಸತ್ತಿದ್ದಾರಾ ಬದುಕಿದ್ದಾರಾ ನೋಡೋಣ. ನಿಮ್ಮ ತಾಕತ್ತನ್ನು ಒಳ್ಳೆಯದಕ್ಕೆ ತೋರಿಸಿ. ಕರಾವಳಿಯ ಕೋಮುಗಲಭೆ ನಿಲ್ಲಿಸಲು ನಿಮ್ಮ ತಾಕತ್ತು ಬಳಸಿ ಎಂದು ಯುವಕ ಹರಿಹಾಯ್ದಿದ್ದಾನೆ. ಇದನ್ನೂ ಓದಿ: ವಿಜಯಪುರ| ದರ ಕುಸಿತ – ರಾಷ್ಟ್ರೀಯ ಹೆದ್ದಾರಿಗೆ ಈರುಳ್ಳಿ ಸುರಿದು ಹೊರಳಾಡಿದ ರೈತ

ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡೀಪಾರು ನೋಟಿಸ್ ನೀಡಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ:58ರಡಿ ನೋಟೀಸ್ ಜಾರಿ ಮಾಡಲಾಗಿದೆ. ಅಲ್ಲದೇ ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: Nelamangala | ಕೆಲಸ ಸಿಗದಿದ್ದಕ್ಕೆ ಮನನೊಂದು ಯುವಕ ನೇಣಿಗೆ ಶರಣು

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ನೋಟಿಸ್ ಜಾರಿ ಮಾಡಿದ್ದು, ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಲು ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳುವ ಬಗ್ಗೆ ನೋಟಿಸ್ ಮೂಲಕ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ

Share This Article