ಟೊಮೆಟೋ ತಿನ್ನೋದನ್ನೇ ನಿಲ್ಲಿಸಿದ್ರೆ ಬೆಲೆ ಕಡಿಮೆಯಾಗುತ್ತೆ – ಯುಪಿ ಸಚಿವೆ ಸಲಹೆ

Public TV
1 Min Read

ಲಕ್ನೋ: ಟೊಮೆಟೋವನ್ನ (Tomatoes) ಮನೆಯಲ್ಲಿ ಬೆಳೆಯಿರಿ ಅಥವಾ ತಿನ್ನೋದನ್ನೇ ನಿಲ್ಲಿಸಿ. ಆಗ ಮಾತ್ರ ಬೆಲೆ ಕಡಿಮೆಯಾಗುತ್ತೆ ಎಂದು ಉತ್ತರ ಪ್ರದೇಶದ ಸಚಿವೆ ಪ್ರತುಭಾ ಶುಕ್ಲಾ (Pratibha Shukla) ಸಲಹೆ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ (Uttar Pradesh) ಸರ್ಕಾರದ ವತಿಯಿಂದ ನಡೆದ ನೆಡುತೋಪು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ದಾರೆ. ಟೊಮೆಟೋ ದುಬಾರಿಯಾಗಿದ್ದರೆ ಜನರು ಅದನ್ನ ತಮ್ಮ ಮನೆಯಲ್ಲೇ ಬೆಳೆಯಬೇಕು ಅಥವಾ ಟೊಮೆಟೋ ತಿನ್ನೋದನ್ನೇ ನಿಲ್ಲಿಸಬೇಕು. ಆಗ ಬೆಲೆಗಳು ಅನಿವಾರ್ಯವಾಗಿ ಇಳಿಯುತ್ತವೆ. ಟೊಮೆಟೋ ಬದಲಿಗೆ ನಿಂಬೆ ತಿನ್ನಬಹುದು. ಯಾರೂ ಟೊಮೆಟೋಗಳನ್ನ ತಿನ್ನದೇ ಇದ್ದರೆ ಬೆಲೆ ಕಡಿಮೆಯಾಗುತ್ತದೆ. ಜೊತೆಗೆ ಕುಟುಂಬದ ಆರ್ಥಿಕ ಸಮಸ್ಯೆಗೂ ಪರಿಹಾರ ಸಿಗುತ್ತದೆ ಎಂದು ಹೇಳಿದ್ದಾರೆ.

ಅಸಾಹಿ ಗ್ರಾಮದಲ್ಲಿ ನ್ಯೂಟ್ರಿಷನ್‌ ಗಾರ್ಡನ್‌ ಮಾಡಿದ್ದೇವೆ. ಅದರಲ್ಲಿ ಟೊಮೆಟೋ (Tomato) ಕೂಡ ಬೆಳೆಯಬಹುದು. ಈ ಮೂಲಕ ಬೆಲೆ ಏರಿಕೆ ತಡೆಯಲು ಪರಿಹಾರ ಕಂಡುಕೊಳ್ಳಬಹುದು ಎಂದಿದ್ದಾರೆ. ಇದನ್ನೂ ಓದಿ: ವಿದೇಶಿ ಪ್ರಜೆಯಿಂದ 5,000 ರೂ. ಪಡೆದು ರಶೀದಿ ಕೊಡದೇ ಯಾಮಾರಿಸಿದ್ದ ಟ್ರಾಫಿಕ್‌ ಪೊಲೀಸ್‌ ಅಮಾನತು

ಈ ನಡುವೆ ರಾಜ್ಯ ವ್ಯವಹಾರಗಳ ಸಚಿವ ಅಶ್ವಿನಿ ಕುಮಾರ್‌ ಚೌಬೆ, ಟೊಮೆಟೋ ಸೇರಿದಂತೆ 22 ಅಗತ್ಯ ಆಹಾರ ಪದಾರ್ಥಗಳ ದೈನಂದಿನ ಬೆಲೆಗಳನ್ನ ಮೇಲ್ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ.

ಅಲ್ಲದೆ, ಹೆಚ್ಚುತ್ತಿರುವ ಟೊಮೆಟೊ ಬೆಲೆಯನ್ನು ಪರಿಶೀಲಿಸಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಸರ್ಕಾರ ಮುಂದಾಗಿದೆ. ಅದಕ್ಕಾಗಿ ಸರ್ಕಾರದ ಬೆಲೆ ಸ್ಥಿರೀಕರಣ ನಿಧಿ ಅಡಿಯಲ್ಲಿ ಟೊಮೆಟೊ ಖರೀದಿಯನ್ನ ಪ್ರಾರಂಭಿಸಿದೆ. ಜೊತೆಗೆ ಗ್ರಾಹಕರಿಗೆ ಸಬ್ಸಿಡಿ ದರದಲ್ಲಿ ಲಭ್ಯವಾಗುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮುದ್ದಿನ ನಾಯಿ ನಾಪತ್ತೆ – ಭದ್ರತಾ ಸಿಬ್ಬಂದಿ ಅಮಾನತು ಮಾಡುವಂತೆ ಪೊಲೀಸ್ ಅಧಿಕಾರಿಗೆ ಪತ್ರ ಬರೆದ ನ್ಯಾಯಾಧೀಶ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್