ಹಾಸನ: ನಾನು ಈ ಬಾರಿ ಹಾಸನದಲ್ಲಿ ಚುನಾವಣೆಗೆ ನಿಲ್ಲಲ್ಲ. ನಾನು ಸ್ಪರ್ಧೆ ಮಾಡಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಹೇಳಿದ್ದಾರೆ.
ಹಾಸನದ ಹೊಳೆನರಸೀಪುರ ತಾ. ಮೂಡಲಹಿಪ್ಪೆಯಲ್ಲಿ ಕಾರ್ಯಕ್ರಮಕ್ಕೆ ದೇವೇಗೌಡರು ಆಗಮಿಸಿದರು. ಈ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, “ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ತೀರ್ಮಾನಿಸಿದ್ದೇನೆ. ಇನ್ನೂ 28 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ಗೆ ಎಷ್ಟು ಹಾಗೂ ಜೆಡಿಎಸ್ಗೆ ಎಷ್ಟು ಎಂಬುದು ತೀರ್ಮಾನ ಆಗಿಲ್ಲ. ಅಂತಿಮವಾದ ಬಳಿಕ ಮಾರ್ಚ್ 15 ರಂದು ರಾಹುಲ್ ಗಾಂಧಿ ಜೊತೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.
ಸದ್ಯ ರಾಹುಲ್ ಗಾಂಧಿ ಅವರು ಪ್ರಚಾರದಲ್ಲಿ ನಿರತಾಗಿದ್ದಾರೆ. ಕೇರಳ, ತಮಿಳುನಾಡು, ಒಡಿಸ್ಸಾದಲ್ಲಿ ಚುನಾವಣಾ ಪ್ರಚಾರದಲ್ಲಿದ್ದಾರೆ. ಮುಂದಿನ ಮೂರು ದಿನಗಳಲ್ಲಿ ರಾಹುಲ್ ಗಾಂಧಿ ಜೊತೆ ಮತ್ತೊಮ್ಮೆ ಸಭೆ ಸೇರುತ್ತೇವೆ. ಶುಭ ಕಾರ್ಯಕ್ಕೂ ಮುನ್ನ ನಾವು ದೇವರ ದರ್ಶನ ಮಾಡುವುದು ವಾಡಿಕೆ. ರೇವಣ್ಣ ಅವರು ಯಾವಾಗಲೂ ದಿನಶುದ್ಧಿ ಬಗ್ಗೆ ಯೋಚನೆ ಮಾಡುತ್ತಾರೆ. ಇಂದು ಮೂಡಲಹಿಪ್ಪೆ ಗ್ರಾಮದಿಂದ ಪ್ರಚಾರವನ್ನು ಆರಂಭ ಮಾಡಿದ್ದೇನೆ ಎಂದು ದೇವೇಗೌಡರು ಹೇಳಿದರು.
ಸದ್ಯ ದೇವೇಗೌಡರು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲವಾ ಅಥವಾ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲವೇ ಎನ್ನುವುದರ ಬಗ್ಗೆ ಸ್ಪಷ್ಟನೆ ನೀಡಿಲ್ಲ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv