NSA ಅಜಿತ್ ದೋವಲ್ ನಿವಾಸಕ್ಕೆ ಅಕ್ರಮ ಪ್ರವೇಶ – ವ್ಯಕ್ತಿ ಬಂಧನ

Public TV
1 Min Read

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿವಾಸಕ್ಕೆ ವ್ಯಕ್ತಿಯೊಬ್ಬ ನುಗ್ಗಲು ಪ್ರಯತ್ನಿಸಿದ್ದು, ಅವನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಬುಧವಾರ ದೋವಲ್ ನಿವಾಸಕ್ಕೆ ಕಾರಿನಲ್ಲಿ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ತಡೆದು ವಶಕ್ಕೆ ತೆಗೆದುಕೊಂಡಿದ್ದಾರೆ. ವ್ಯಕ್ತಿ ಬಾಡಿಗೆ ಕಾರು ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ನಲ್ಲಿ ಹನುಮಾನ್ ಚಾಲೀಸಾ – ಪ್ರತಿಭಟನಕಾರರನ್ನು ತಡೆದ ಪೊಲೀಸರು

ಬಂಧಿತ ವ್ಯಕ್ತಿ ತನ್ನೊಳಗೆ ಯಾರೋ ಚಿಪ್ ಅಳವಡಿಸಿದ್ದಾರೆ ಹಾಗೂ ತನ್ನನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತನಿಖೆ ಸಮಯದಲ್ಲಿ ಪೊಲೀಸರಿಗೆ ತಿಳಿಸಿದ್ದಾನೆ. ಆದರೆ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಒಂದೇ ಗ್ರಾಮದಲ್ಲಿದ್ದ 33 ಸೈಬರ್ ವಂಚಕರು ಅರೆಸ್ಟ್

ಇದೀಗ ದೆಹಲಿ ಪೊಲೀಸರ ವಿಶೇಷ ಸೆಲ್ ವ್ಯಕ್ತಿ ಮೇಲೆ ತನಿಖೆ ನಡೆಸುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *