– ತಿಮರೋಡಿಗೆ ಬಂಧನ ಭೀತಿ
ಮಂಗಳೂರು: ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಮೂರು ಬಾರಿ ನೋಟಿಸ್ ನೀಡಿದ್ದರು. ಪೊಲೀಸರು ನೀಡಿದ ಮೂರು ನೋಟಿಸ್‌ಗೂ ತಿಮರೋಡಿ ಪ್ರತಿಕ್ರಿಯಿಸಿರಲಿಲ್ಲ. ಇದನ್ನೂ ಓದಿ: ಮಹೇಶ್ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ
ವಿಚಾರಣೆಗೆ ಹಾಜರಾದರೆ ಬಂಧನ ಭೀತಿ ಕಾರಣಕ್ಕೆ ನಾಪತ್ತೆಯಾಗಿದ್ದಾರೆ. ಕಳೆದ 20 ದಿನಗಳಿಂದ ತಿಮರೋಡಿ ತಲೆಮರೆಸಿಕೊಂಡಿದ್ದಾರೆ.
ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ಶೋಧ ಸಂದರ್ಭದಲ್ಲಿ ತಿಮರೋಡಿ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿರುವುದು ಬೆಳಕಿಗೆ ಬಂದಿತ್ತು. ಎಸ್‌ಐಟಿ ಅಧಿಕಾರಿಗಳು 2 ತಲವಾರು ಮತ್ತು ಒಂದು ಬಂದೂಕು ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು. ಇದನ್ನೂ ಓದಿ: ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್ – ಮಹೇಶ್ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್ ಜಾರಿ