ಹೈದರಾಬಾದ್‌ನಲ್ಲಿ ಮುಂಬೈ ಪೊಲೀಸರ ದಾಳಿ – 12,000 ಕೋಟಿ ಮೌಲ್ಯದ ಮಾದಕ ವಸ್ತು ವಶ

By
1 Min Read

ಹೈದರಾಬಾದ್‌: ತೆಲಂಗಾಣದ (Telangana) ಚೆರ್ಲಪಲ್ಲಿಯಲ್ಲಿ ನಿಷೇಧಿತ ಮೀಥೈಲೆನೆಡಿಯಾಕ್ಸಿ ಮೆಥಾಂಫೆಟಮೈನ್ (MD) ಡ್ರಗ್ಸ್‌ ತಯಾರಿಸುತ್ತಿದ್ದ ಕಾರ್ಖಾನೆಯ ಮೇಲೆ ಮುಂಬೈನ (Mumbai) ಮೀರಾ ಭಯಂದರ್ ವಸೈ-ವಿರಾರ್ (MBVV) ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ವಶಪಡಿಸಿಕೊಂಡಿರುವ ಮಾದಕ ವಸ್ತುಗಳು ಸುಮಾರು 12,000 ಕೋಟಿ ರೂ. ಮೌಲ್ಯದ್ದಾಗಿವೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಆ.8 ರಂದು ಮುಂಬೈನಲ್ಲಿ ಬಾಂಗ್ಲಾದ ಮಹಿಳೆ ಫಾತಿಮಾ ಮುರಾದ್ ಶೇಖ್ (23) ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದರು. ಆಕೆಯ ಬಂಧನದ ಬಳಿಕ, ತನಿಖೆಯ ವೇಳೆ ಡ್ರಗ್ಸ್‌ ತಯಾರಿಕೆ ಬಗ್ಗೆ ಮಾಹಿತಿ ಸಿಕ್ಕಿತ್ತು. ಇದೇ ಮಾಹಿತಿಯ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ಗಂಡನನ್ನು ಹೊಡೆದು ಕೊಲ್ಲುವಾಗ ಎದುರಲ್ಲೇ ಇದ್ದ ಸೋನಮ್ – ಹನಿಮೂನ್‌ ಕೊಲೆ ಕೇಸ್‌ ಚಾರ್ಜ್‌ಶೀಟ್‌ನಲ್ಲೇನಿದೆ?

ಕಾರ್ಯಾಚರಣೆಯ ಸಮಯದಲ್ಲಿ, ಅಧಿಕಾರಿಗಳು ಮಾದಕವಸ್ತು ಉತ್ಪಾದನೆಗೆ ಬಳಸುವ 32,000 ಲೀಟರ್ ಕಚ್ಚಾ ವಸ್ತು ಮತ್ತು 5.968 ಕಿಲೋಗ್ರಾಂಗಳಷ್ಟು ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮುಂಬೈ ಮತ್ತು ತೆಲಂಗಾಣದಲ್ಲಿ ಒಟ್ಟು 12 ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 3 ಕಾರು, 1 ಬೈಕ್‌ ಹಾಗೂ 27 ಮೊಬೈಲ್‌ ವಶಕ್ಕೆ ಪಡೆಯಲಾಗಿದೆ.

ಕಾರ್ಖಾನೆಯ ಹಿಂದಿನ ಮಾಸ್ಟರ್‌ಮೈಂಡ್‌ಗಳನ್ನು ಪತ್ತೆಹಚ್ಚಲು ಹೆಚ್ಚಿನ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ‌ʻಬೆತ್ತಲೆಯಾಗಿ ಬರ್ತಾರೆ, ಮಹಿಳೆಯರನ್ನ ಹೊತ್ತೊಯ್ತಾರೆʼ – ಮೀರತ್‌ನಲ್ಲಿ ನಡುಕ ಹುಟ್ಟಿಸಿದ ʻನಗ್ನ ಗ್ಯಾಂಗ್‌ʼ

Share This Article