ಪ್ರಯಾಣಿಕರ ಸೋಗಿನಲ್ಲಿ ಗಾಂಜಾ ಸಾಗಾಟ – 14 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

Public TV
1 Min Read

ಬೀದರ್: ಜಿಲ್ಲೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, 14 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ಹೈದರಾಬಾದ್ (Hyderabad) ಮೂಲದ ಪವನ್ ಎಂದು ಗುರುತಿಸಲಾಗಿದ್ದು, ಪ್ರಯಾಣಿಕರ ಸೋಗಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ.ಇದನ್ನೂ ಓದಿ: Tumakuru| ವಾಮಾಚಾರ ಮಾಡಿ ದೇವಾಲಯದ ಬಾಗಿಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಹಾರಾಷ್ಟ್ರದಿಂದ ತೆಲಂಗಾಣಕ್ಕೆ ರೈಲಿನಲ್ಲಿ ತೆರಳಿ ಅಲ್ಲಿಂದ ಹೈದರಾಬಾದ್‌ಗೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನದಲ್ಲಿ ಭಾಲ್ಕಿ ಪೊಲೀಸರು, ತಹಶೀಲ್ದಾರ್ ಹಾಗೂ ಅಧಿಕಾರಿಗಳು ಸೇರಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಬ್ಯಾಗಿನಲ್ಲಿ ಬರೋಬ್ಬರಿ 14 ಲಕ್ಷ ರೂ. ಮೌಲ್ಯದ ಅಕ್ರಮ ಗಾಂಜಾ ಪತ್ತೆಯಾಗಿದೆ.

ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ, ಗಾಂಜಾ ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ‘ಡೆವಿಲ್’ ಚಿತ್ರೀಕರಣ ಆರಂಭಕ್ಕೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ದಾಸ

 

Share This Article