ಚಾ.ನಗರ| ಕೇರಳಿಗ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು

1 Min Read

ಚಾಮರಾಜನಗರ: ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ (Tiger Death) ಸಾವನ್ನಪ್ಪಿರುವ ಘಟನೆ ಚಾಮರಾಜನಗರ (Chamarajanagara) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಬಳಿ ನಡೆದಿದೆ.

- Advertisement -

ಕೇರಳ ಮೂಲದವರು ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಸುಮಾರು ಎರಡು ವರ್ಷ ವಯಸ್ಸಿನ ಹುಲಿ ಸಾವಿಗೀಡಾಗಿದೆ. ಸ್ಥಳಕ್ಕೆ ಪೊಲೀಸ್, ಅರಣ್ಯ ಹಾಗೂ ಸೆಸ್ಕ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕುರ್ಚಿ ಕದನದ ಮಧ್ಯೆ ಸಚಿವರಿಗೆ ಸಿಎಂ ಡಿನ್ನರ್‌ – ಭಾಗವಹಿಸಿದ 14 ಮಂದಿ ಯಾರು?

- Advertisement -

- Advertisement -

ಕೇರಳ ಮೂಲದ ಪರಮೇಶ್ ಎಂಬವರು ಸ್ಥಳೀಯರ ಜಮೀನನ್ನು ಗುತ್ತಿಗೆ ಪಡೆದಿದ್ದರು. ಈ ಭಾಗದಲ್ಲಿ ಹುಲಿ, ಚಿರತೆ ಸಂಚಾರ ಹೆಚ್ಚಿದೆ. ಈ ಹಿನ್ನೆಲೆ ಅಧಿಕಾರಿಗಳು ಥರ್ಮಲ್ ಡ್ರೋನ್ ಹಾರಿಸುವಾಗ ಹುಲಿ ಸತ್ತು ಬಿದ್ದಿರೋದು ಗೊತ್ತಾಗಿದೆ.

- Advertisement -

ಹಿಂದೆ ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷಕ್ಕೆ 6 ಹುಲಿ, ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಉರುಳಿಗೆ ಒಂದು ಹುಲಿ ಸಾವನ್ನಪ್ಪಿತ್ತು. ಇದೀಗ ಗುಂಡ್ಲುಪೇಟೆ ಭಾಗದಲ್ಲಿ ಸಹಜವಾಗಿ ಹುಲಿ ಸಾವನ್ನಪ್ಪಿದೆ. ಇದನ್ನೂ ಓದಿ: ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Share This Article