Madhya Pradesh : ಮಹಿಳೆ ಮೇಲೆ 1 ತಿಂಗಳ ಕಾಲ ರೇಪ್‌ – ಜೆಸಿಬಿಯಿಂದ ಆರೋಪಿಯ ಮನೆ ಧ್ವಂಸ

Public TV
1 Min Read

ಭೋಪಾಲ್‌: ಮಧ್ಯಪ್ರದೇಶದ ( Madhya Pradesh) ಗುನಾದಲ್ಲಿ ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ (Rape) ಮತ್ತು ಚಿತ್ರಹಿಂಸೆ ನೀಡಿದ ಆರೋಪಿಯ ಮನೆಯನ್ನು ಜೆಸಿಬಿಯಿಂದ (JCB) ಧ್ವಂಸ ಮಾಡಲಾಗಿದೆ.

ಭಾನುವಾರ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಮನೆಯನ್ನು ನೆಲಸಮಗೊಳಿಸಿದ್ದಾರೆ. ಆರೋಪಿಯ ಮನೆಯನ್ನು ಜೆಸಿಬಿಯಿಂದ ಕೆಡವುತ್ತಿರುವ ವಿಡಿಯೋ ವೈರಲ್‌ (Video Viral) ಆಗಿದೆ.

ಅಯಾನ್ ಪಠಾಣ್ ತನ್ನ ನೆರೆ ಮನೆಯಲ್ಲಿ ವಾಸಿಸುತ್ತಿದ್ದ 23 ವರ್ಷದ ಮಹಿಳೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಒಂದು ತಿಂಗಳ ಕಾಲ ಚಿತ್ರಹಿಂಸೆ ನೀಡಿದ್ದ. ಇದನ್ನೂ ಓದಿ: ರಾಜ್ಯದ ಮಗಳು ಮೃತಪಟ್ಟಿದ್ದಾರೆ.. ಯಾಕೆ ನೀವು ಧ್ವನಿ ಎತ್ತುತ್ತಿಲ್ಲ: ಪ್ರಕಾಶ್ ರಾಜ್, ಚೇತನ್ ವಿರುದ್ಧ ಪ್ರಥಮ್ ಕಿಡಿ

ಕೂಲಿ ಕೆಲಸ ಮಾಡುತ್ತಿದ್ದ ಅಯಾನ್ ಮಹಿಳೆಯ ತಾಯಿಯ ಹೆಸರಿನಲ್ಲಿರುವ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ. ಆಕೆಯ ಆಸ್ತಿಯನ್ನು ತನಗೆ ನೀಡದ್ದಕ್ಕೆ ಮಹಿಳೆಯನ್ನು ಹೊಡೆದು ಆಕೆಯ ಕಣ್ಣು ಮತ್ತು ಬಾಯಿಗೆ ಮೆಣಸಿನ ಪುಡಿಯನ್ನು ತುಂಬಿದ್ದ. ಅಷ್ಟೇ ಅಲ್ಲದೇ ಹೊರಗಡೆ ಆಕೆಯ ಧ್ವನಿ ಕೇಳದೇ ಇರಲು ಬಾಯಿಗೆ ಅಂಟುಗಳನ್ನು ಹಾಕಿದ್ದ. ಇದನ್ನೂ ಓದಿ: ಮತದಾನ ವೇಳೆ ಗುಂಡಿನ ದಾಳಿ, ಇವಿಎಂ ಧ್ವಂಸ – ಮಣಿಪುರದ 11 ಮತಗಟ್ಟೆಗಳಲ್ಲಿ ಮರು ಮತದಾನ

ಅಷ್ಟೇ ಅಲ್ಲದೇ ತನ್ನ ಸಂಬಂಧಿಕರ ನೆರವಿನಿಂದ ಮಹಿಳೆಗೆ ಹಲವು ಬಾರಿ ದೈಹಿಕ ಹಿಂಸೆ ನೀಡಿದ್ದ. ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ದೂರು ದಾಖಲಿಸಿದ ನಂತರ ಅಯಾನ್‌ನನ್ನು ಈಗ ಬಂಧಿಸಲಾಗಿದೆ.

 

ಮಧ್ಯಪ್ರದೇಶದಲ್ಲಿ ರೇಪ್‌ ಆರೋಪಿಗಳ ಮನೆ, ಕಟ್ಟಡಗಳನ್ನು ಧ್ವಂಸ ಮಾಡುವುದು ಹೊಸದೆನಲ್ಲ. ಈ ಹಿಂದೆಯೂ ಹಲವು ಬಾರಿ ಬಿಜೆಪಿ ಸರ್ಕಾರ ರೇಪ್‌ ಆರೋಪಿಗಳ ಕಟ್ಟಡಗಳನ್ನು ಧ್ವಂಸ ಮಾಡಿತ್ತು.

Share This Article