ರಾಯಚೂರು: ಜಿಲ್ಲೆಯ ಸಿರವಾರ (Sirwar) ತಾಲೂಕಿನ ಹಾಲಾಪುರದಿಂದ ಅಂದಾಜು 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಲಾರಿಯನ್ನ ಹಿಂಬಾಲಿಸಿ, ಕವಿತಾಳ-ಮಸ್ಕಿ ರಸ್ತೆಯ ಜಂಗಮರ ಹಳ್ಳಿ ಕ್ರಾಸ್ ಬಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ 600 ಅಕ್ಕಿ ಚೀಲಗಳಿದ್ದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಅಂದಾಜು 8 ಲಕ್ಷ ರೂ. ಮೌಲ್ಯದ 30 ಟನ್ ಪಡಿತರ ಅಕ್ಕಿಯಿದ್ದ 600 ಚೀಲಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: IPL ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ – ಡಿಕೆ ಸುರೇಶ್
ದಾಳಿ ವೇಳೆ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ಆರೋಪಿ ವಿರೇಶ್ ಹಾಲಾಪುರ ಪರಾರಿಯಾಗಿದ್ದಾನೆ. ಈ ಸಂಬಂಧ ಮಾನ್ವಿ (Manvi) ತಾಲೂಕು ಆಹಾರ ನಿರೀಕ್ಷಕ ದೇವರಾಜ್ ದೂರು ನೀಡಿದ್ದು, ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

