ಬೆಳಗಾವಿ: ಹೆಂಡತಿಯನ್ನು ಕೊಂದು ಬೆಡ್ ಕೆಳಗೆ ಹೆಣ ಅಡಗಿಸಿಟ್ಟು ಪಾಪಿ ಪತಿ ಪರಾರಿಯಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿಯಲ್ಲಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಕೊಲೆ ನಡೆದಿದೆ ಎನ್ನಲಾಗಿದ್ದು, ಮೊಬೈಲ್ ಸ್ವಿಚ್ ಆಪ್ ಮಾಡಿಕೊಂಡು ಗಂಡ ಪರಾರಿಯಾಗಿದ್ದಾನೆ. ಊರಿಗೆ ಹೋಗಿದ್ದ ಅತ್ತೆ ಮರಳಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸಾಕ್ಷಿ ಆಕಾಶ್ ಕಂಬಾರ (20) ಕೊಲೆಯಾದ ದುರ್ದೈವಿ. ಆಕಾಶ್ ಕಂಬಾರ್ ಕೊಲೆ ಮಾಡಿ ಪರಾರಿಯಾಗಿರುವ ಪಾಪಿ ಪತಿ. ಸಾಕ್ಷಿ ಹಾಗೂ ಆಕಾಶ್ ಇಬ್ಬರು ಕಳೆದ 5 ತಿಂಗಳ ಹಿಂದೆ ಮದುವೆಯಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕೊಲೆ ಯಾಕಾಗಿ ಆಯ್ತು ಎನ್ನುವುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಈವರೆಗೆ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣವೂ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.