ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು: ವಿಜಯೇಂದ್ರ

Public TV
1 Min Read

ದಾವಣಗೆರೆ: ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು. ಆ ನಿಟ್ಟಿನಲ್ಲಿ ರೇಣುಕಾಚಾರ್ಯ ಅವರು ತಮ್ಮ ಅನಿಸಿಕೆಯನ್ನು ತಿಳಿಸಿದ್ದಾರೆ. ಅವರ ಹೇಳಿಕೆಯಲ್ಲಿ ದುರುದ್ದೇಶವಿಲ್ಲ ಎಂದು ಶಾಸಕ ರೇಣುಕಾಚಾರ್ಯ ಹೇಳಿಕೆಗೆ ಸಾಥ್ ನೀಡಿದರು.

ಕೋರ್ ಕಮಿಟಿಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆಯಾಗಿದೆ. ಹಾನಗಲ್ ಸಿಂದಗಿ ಉಪಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕೆಲಸಗಳ ಬಗ್ಗೆ ರಾಜ್ಯ ಜನರಿಗೆ ತಿಳಿಸಬೇಕು. ಮಾಜಿ ಸಿಎಂ ಯಡಿಯೂರಪ್ಪ ಪಕ್ಷವನ್ನು ಕಟ್ಟಲು ಸಾಕಷ್ಟು ಶ್ರಮ ಪಟ್ಟಿದ್ದಾರೆ. ಸ್ಪಷ್ಟ ಬಹುಮತದಿಂದ ಪಕ್ಷ ಅಧಿಕಾರಕ್ಕೆ ತರಲು ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಾಧ್ಯತೆ

ದೇವಾಲಯಗಳನ್ನು ಒಡೆಯುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ದೇವಾಲಯಗಳ ಹೆಸರಿನಲ್ಲಿ ಕಾಂಗ್ರೆಸ್ ಮೊಸಳೆ ಕಣ್ಣೀರು ಹಾಕುತ್ತಿದೆ. ಅಧಿಕಾರಿಗಳು ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ಎಲ್ಲಾರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತೆರವು ಮಾಡಬೇಕಿತ್ತು. ಆದರೆ ಅದು ನಡೆಯದೆ ತಪ್ಪಾಗಿದೆ. ಈಗ ಕಾಂಗ್ರೆಸ್ ಗೆ ಇದ್ದಕ್ಕಿದ್ದಂತೆ ಹಿಂದೂಗಳ ಮೇಲೆ ಪ್ರೀತಿ ಬಂದಿದೆ ಎಂದು ಟೀಕಿಸಿದರು. ಇದನ್ನೂ ಓದಿ:  ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಭೇಟಿ ನೀಡಬಹುದು – ಜಿಲ್ಲಾಡಳಿತದಿಂದ ನಿರ್ಬಂಧ ತೆರವು

ಮೋದಿ ಅವರ ಹುಟ್ಟುಹಬ್ಬವನ್ನು ದೇಶದ ಪ್ರತಿಯೊಬ್ಬರು ಸಂಭ್ರಮದಿಂದ ಆಚರಿಸಿದರು. ಆದರೆ ಕಾಂಗ್ರೆಸ್ ನಿರುದ್ಯೋಗ ದಿನಾಚರಣೆ ಎಂದು ಆಚರಣೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ಮಾತ್ರ ನಿರುದ್ಯೋಗಿಗಳು ಇದ್ದಾರೆ. ಮುಂದೆ ಬರುವ ಎಲ್ಲಾ ಚುನಾವಣೆಯಲ್ಲಿ ಹೇಳ ಹೆಸರಿಲ್ಲದೆ ಕಾಂಗ್ರೆಸ್ ಹೋಗುತ್ತೆ ಎಂದು ಶಪಿಸಿದರು.

Share This Article
Leave a Comment

Leave a Reply

Your email address will not be published. Required fields are marked *