ಪಂಜಾಬ್‍ನಲ್ಲಿ AAP ಅಧಿಕಾರಕ್ಕೆ ಬಂದ್ರೆ ಜನರ ಸಲಹೆ ಮೇರೆಗೆ ಬಜೆಟ್: ಅರವಿಂದ್ ಕೇಜ್ರಿವಾಲ್

Public TV
1 Min Read

ನವದೆಹಲಿ: ಪಂಜಾಬ್‍ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಜನ ಸಾಮಾನ್ಯರ ಸಲಹೆಗಳನ್ನು ಸ್ವೀಕರಿಸಿ ನಂತರ ರಾಜ್ಯದ ಬಜೆಟ್ ಸಿದ್ಧಪಡಿಸಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಉತ್ತಮ ಪರಿಹಾರ ನೀಡಲಾಗುತ್ತದೆ. ಉದಾಹರಣೆಗೆ ದೆಹಲಿಯಲ್ಲಿ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಪಡೆದು ತಮ್ಮ ಸರ್ಕಾರ ಬಜೆಟ್ ಸಿದ್ಧಪಡಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಚುನಾವಣೆ: ರಾಮನಗರದಿಂದ ಮಾಜಿ ಸಿಎಂ ಹರೀಶ್ ರಾವತ್ ಕಣಕ್ಕೆ

ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಈ ವರ್ಷದ 2022-23ರ ಬಜೆಟ್‍ಗಾಗಿ ಚರ್ಚೆಯನ್ನು ಪ್ರಾರಂಭಿಸಿದೆ. ಈ ನಿಟ್ಟಿನಲ್ಲಿ ಜನಸಾಮಾನ್ಯರು ಮತ್ತು ಉದ್ಯಮಿಗಳಿಂದ ಸಲಹೆಗಳನ್ನು ಪಡೆಯಲಾಗುತ್ತಿದೆ. ಹಾಗಾಗಿ ಪಂಜಾಬ್‍ನಲ್ಲೂ ಇದೇ ರೀತಿಯಲ್ಲಿ ಬಜೆಟ್ ಸಿದ್ಧಪಡಿಸುತ್ತೇವೆ ಎಂದು ಹೇಳಿದ್ದಾರೆ.

ಪಂಜಾಬ್‍ನಲ್ಲಿ ಬಜೆಟ್ ಸಿದ್ಧಪಡಿಸುವ ಮುನ್ನ ಸಾಮಾನ್ಯ ಜನರು, ಅದರಲ್ಲಿಯೂ ವಿಶೇಷವಾಗಿ ವ್ಯಾಪಾರಿಗಳು, ರೈತರು, ಕೂಲಿ ಕಾರ್ಮಿಕರು, ಮಹಿಳೆಯರು, ಯುವಕರು ಮತ್ತು ಉದ್ಯೋಗಿಗಳು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಳ್ಳನೆಂದು ಆಟೋ ಚಾಲಕನನ್ನು ಹೊಡೆದು ಕೊಂದ್ರು

ರಾಜ್ಯದ ನಿರ್ಲಕ್ಷಿತ ಮತ್ತು ವಂಚಿತ ವರ್ಗಗಳು ತಮ್ಮ ಸಮಸ್ಯೆಗಳು ಮತ್ತು ಸಲಹೆಗಳನ್ನು ನೇರವಾಗಿ ಸರ್ಕಾರಕ್ಕೆ ತಿಳಿಸಬಹುದು ಮತ್ತು ಸರ್ಕಾರ ಅವರ ಅಭಿಪ್ರಾಯಗಳನ್ನು ಬಜೆಟ್ ಮತ್ತು ಸರ್ಕಾರಿ ಯೋಜನೆಗಳಲ್ಲಿ ಸೇರಿಸಲಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *