ಸ್ವಾತಂತ್ರ್ಯ ದಿನಾಚರಣೆ ವೇಳೆ ಇನ್ಸ್‌ಪೆಕ್ಟರ್, ಕಾನ್‍ಸ್ಟೇಬಲ್ ನಾಗಿಣಿ ಡ್ಯಾನ್ಸ್ – ಇಬ್ಬರು ಎತ್ತಂಗಡಿ

Public TV
1 Min Read

ಲಕ್ನೋ: ಸ್ವಾತಂತ್ರ್ಯ ದಿನಾಚರಣೆ ವೇಳೆ ನಡು ರಸ್ತೆಯಲ್ಲಿ ನಾಗಿಣಿ ಡ್ಯಾನ್ಸ್‌ ಮಾಡಿದ್ದ ಉತ್ತರ ಪ್ರದೇಶದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.

ಉತ್ತರ ಪ್ರದೇಶದ ಕೊತ್ವಾಲಿ ಜಿಲ್ಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಯದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್‍ಸ್ಟೇಬಲ್ ನಾಗಿಣಿ ಡ್ಯಾನ್ಸ್‌ ಮಾಡಿದ್ದರು. ಈ ವೀಡಿಯೋವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು.  ಇದನ್ನೂ ಓದಿ: ಗೌರಿ-ಗಣೇಶ ಹಬ್ಬಕ್ಕೆ ಬರ್ತಿದ್ದಾರೆ ಅಪ್ಪು- ಈ ಬಾರಿ ಪುನೀತ್, ಗಣೇಶನದ್ದೇ ಟ್ರೆಂಡ್!

ವೀಡಿಯೋದಲ್ಲಿ ಪೊಲೀಸ್ ಅಧಿಕಾರಿಗಳು ಬ್ಯಾಂಡ್ ಸೆಟ್‍ಗಳ ಬೀಟ್‍ಗೆ ಸರಿಯಾಗಿ ನೃತ್ಯ ಮಾಡಿದ್ದಾರೆ. ಸಬ್-ಇನ್ಸ್‌ಪೆಕ್ಟರ್ ಪುಂಗಿ ಊದುತ್ತಿದ್ದರೆ, ಕಾನ್‍ಸ್ಟೇಬಲ್ ತಿರುಗುತ್ತಿರುತ್ತಾರೆ. ಇದೇ ವೇಳೆ ಹಲವಾರು ಪೊಲೀಸ್ ಸಿಬ್ಬಂದಿ ಪೊಲೀಸ್ ಅಧಿಕಾರಿಗಳಿಗೆ ಚಪ್ಪಾಳೆ ತಟ್ಟುತ್ತಿರುವುದನ್ನು ಕಾಣಬಹುದಾಗಿದೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಟ್ವಿಟರ್‌ನಲ್ಲಿ 76,000ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಇದನ್ನೂ ಓದಿ: ಕೊಡಗಿನಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *