ಹಾವೇರಿಯಲ್ಲಿ ನಿರಂತರ ಮಳೆ – ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು, 3 ಮಂದಿ ಗಂಭೀರ

Public TV
1 Min Read

ಹಾವೇರಿ: ನಿರಂತರ ಮಳೆ ಹಿನ್ನೆಲೆ ಮನೆಯ ಮೇಲ್ಚಾವಣಿ (Roof) ಕುಸಿದು ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಹಾವೇರಿ (Haveri) ಜಿಲ್ಲೆ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.

ಚೆನ್ನಮ್ಮ (30), ಅವಳಿ ಮಕ್ಕಳಾದ ಅನುಶ್ರೀ (1), ಅಮೂಲ್ಯ (1) ಮೃತ ದುರ್ದೈವಿಗಳು. ಕಳೆದ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಇಂದು ನಸುಕಿನ ಜಾವ ಸುಮಾರು 3:30ಕ್ಕೆ ಮನೆಯ ಮೇಲ್ಚಾವಣಿ ಕುಸಿದು ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಒಟ್ಟು 6 ಜನ ವಾಸವಾಗಿದ್ದರು. ಈ ಪೈಕಿ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಹಾಸನದ ಮಲೆನಾಡು ಭಾಗದಲ್ಲೂ ಮಳೆಯಬ್ಬರ; ಶಿರಾಡಿಘಾಟ್‌ನಲ್ಲಿ ಸರಣಿ ಭೂಕುಸಿತ – ಬೆಂಗಳೂರು, ಮಂಗಳೂರು ಸಂಚಾರ ಬಂದ್

ನೆರೆ ಹೊರೆಯವರಿಂದ ಆಸ್ಪತ್ರೆಗೆ ದಾಖಲಿಸೋ ಪ್ರಯತ್ನ ನಡೆದರೂ ಚಿಕಿತ್ಸೆ ಫಲಕಾರಿಯಾಗದೇ ಮೂವರು ಮೃತಪಟ್ಟಿದ್ದಾರೆ. ವಯೋವೃದ್ಧೆ ಯಲ್ಲಮ್ಮ ಹಾಗೂ ಅವರ ಪುತ್ರ ಮತ್ತು ಸೊಸೆಗೆ ಸವಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಒಂದು ಗ್ರಾಂ ಡ್ರಗ್ಸ್‌ ಕೂಡ ಭಾರತ ಪ್ರವೇಶಿಸಲು ಬಿಡಲ್ಲ: ಅಮಿತ್‌ ಶಾ ಪ್ರತಿಜ್ಞೆ

ಇನ್ನು ಘಟನಾ ಸ್ಥಳಕ್ಕೆ ಸವಣೂರು ಎಸಿ ಮಹಮ್ಮದ್ ಅಜೀಜ್ ಭೇಟಿ ನೀಡಿ ಮೇಲ್ಚಾವಣಿ ಮತ್ತು ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಇದನ್ನೂ ಓದಿ: Madikeri: ಗುಡ್ಡ ಕುಸಿಯುವ ಭೀತಿ; ಸಂಪಾಜೆ ರಸ್ತೆಯಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ!

Share This Article