ಐಟಿ ಭರ್ಜರಿ ಬೇಟೆ- ಬಾಕ್ಸ್‌ಗಳಲ್ಲಿ ಕಂತೆ ಕಂತೆ ಸಂಗ್ರಹಿಸಿಟ್ಟಿದ್ದ 42 ಕೋಟಿ ರೂ. ಸೀಜ್

By
1 Min Read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಆದಾಯ ತೆರಿಗೆ ಇಲಾಖೆಯ (IT Raid in Bengaluru) ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ.

ಬಿಬಿಎಂಪಿ (BBMP) ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಹಾಗೂ ಮಾಜಿ ಕಾರ್ಪೊರೇಟರ್ ಅಶ್ವಥಮ್ಮ ದಂಪತಿ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 23 ಬಾಕ್ಸ್‍ಗಳಲ್ಲಿದ್ದ 42 ಕೋಟಿ ರೂಪಾಯಿ ಸೀಜ್ ಮಾಡಿದ್ದಾರೆ. ಅಶ್ವಥಮ್ಮ ಅವರು ವಾರ್ಡ್ ನಂಬರ್ 95ರಲ್ಲಿ ಕಾರ್ಪೋರೇಟರ್ ಆಗಿದ್ದು, ಇದೀಗ ಅವರ ಸುಲ್ತಾನ್ ಪಾಳ್ಯದ (Sultan Palya) ಮನೆಯ ಮೇಲೆ ಐಟಿ ದಾಳಿಯಾಗಿದೆ.

ದಾಳಿ ವೇಳೆ ಮನೆಯ ಬೆಡ್‍ರೂಂನಲ್ಲಿ 42 ಕೋಟಿ ಹಣ ಸಿಕ್ಕಿದೆ. ಬಾಕ್ಸ್ ಗಳಲ್ಲಿ ಗರಿ ಗರಿ 500 ರೂಪಾಯಿ ನೋಟಿನ ಕಂತೆಯೇ ಪತ್ತೆಯಾಗಿದೆ. 23 ಬಾಕ್ಸ್ ನಲ್ಲಿ 42 ಕೋಟಿ ಹಣ ಸಿಕ್ಕಿದ್ದು, ಒಂದೊಂದು ಬಾಕ್ಸ್ ಅಲ್ಲೂ 1ಕೋಟಿ 65 ಲಕ್ಷ ಹಣ ಕೂಡಿಡಲಾಗಿತ್ತು. ಜಸ್ಟ್ 1 ಗಂಟೆ ಕಳೆದಿದ್ದರೆ ಹಣದ ಸಮೇತ ಎಸ್ಕೇಪ್ ಆಗುತ್ತಿದ್ದರು. ಕಾರಿನಲ್ಲಿ ತಮಿಳುನಾಡಿಗೆ (Tamilnadu) ಹಣ ಸಾಗಾಟ ಮಾಡಲು ತಯಾರು ಮಾಡಿದ್ದರು. ಇದನ್ನೂ ಓದಿ: ಪೊಲೀಸರ ಸೋಗಿನಲ್ಲಿ ವಾಹನ ತಪಾಸಣೆ – 50 ಲಕ್ಷ ರೂ. ಎಗರಿಸಿದ ಕಳ್ಳರು

ಸದ್ಯ ಐಟಿ ಅಧಿಕಾರಿಗಳು 42 ಕೋಟಿ ಹಣ ಸೀಜ್ ಮಾಡಿದ್ದು, ಇಡಿ (ED) ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಅಡಿ ಪ್ರಕರಣ ದಾಖಲಿಗೆ ಇಡಿ ತಯಾರಿ ನಡೆಸುತ್ತಿದೆ. ಕೆಲ ದಿನಗಳ ಹಿಂದಷ್ಟೇ ಸಿಎಂ ಭೇಟಿ ಆಗಿ ಬಾಕಿ ಬಿಲ್ ಬಿಡುಗಡೆಗೆ ಮನವಿ ಮಾಡಲಾಗಿತ್ತು. ಆಗಸ್ಟ್ 8 ರಂದು ಆರ್.ಅಂಬಿಕಾಪತಿಯವರು ಸಿದ್ದರಾಮಯ್ಯ (Siddaramaiah) ಭೇಟಿಯಾಗಿದ್ದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್